ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಯಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲೆಯ ಆಡಳಿತ ಟ್ರಸ್ಟಿನ ಸದಸ್ಯ ಶೇಖ್ ಅಹಮ್ಮದ್ ಮಂಗಳೂರು ನೆರವೇರಿಸಿದರು.
ಅಧ್ಯಕ್ಷತೆಯನ್ನು ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿ ವಿದ್ಯಾರ್ಥಿಗಳು ಜೀವನದಲ್ಲಿ ಜಾತಿ ಮತ ಧರ್ಮ ಭೇದವನ್ನು ಮರೆತು ಸಾಮರಸ್ಯತೆಯಿಂದ ಬಾಳಿ ಆದರ್ಶ ಭಾರತವನ್ನು ನಿರ್ಮಿಸಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಯೆನಪೋಯ ಮೆಡಿಕಲ್ ಕಾಲೇಜ್ ಮಂಗಳೂರು ಇಲ್ಲಿಯ ಕೆಮಿಸ್ಟ್ರಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ| ಸರೀನ್ ಶೇಕ್ ಮಾತನಾಡಿ ವಿದ್ಯಾರ್ಥಿಗಳು ಶಿಸ್ತು ಮತ್ತು ಆದರ್ಶವನ್ನು ಮೈಗೂಡಿಸಿಕೊಂಡು ಪ್ರಬುದ್ಧ ಭಾರತೀಯರಾಗಿ ಬೆಳೆಯಬೇಕು ಎಂದು ಹೇಳಿ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ವೇದಿಕೆಯಲ್ಲಿ ಆಡಳಿತ ಟ್ರಸ್ಟಿನ ಕಾರ್ಯದರ್ಶಿಯಾದ ಸೈಯದ್ ಆಯುಬ್, ಶಾಲಾ ಮುಖ್ಯೋಪಾಧ್ಯಾಯಿಣಿ ಜಾಕಿನ್ ಬಿನ್ ಮತ್ತು ಆಡಳಿತ ಟ್ರಸ್ಟಿನ ಸದಸ್ಯರಾದ ಶೇಕ್ ಅಬ್ದುಲ್ ಗಪೂರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸುಂದರವಾದ ಪಥಸಂಚಲನ ನೆರವೇರಿತು. ವಿದ್ಯಾರ್ಥಿಗಳ ಭಾರತೀಯತೆಯ ವೈಭವವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆಯಿತು. 10ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಕಾರ್ಯಕ್ರಮವನ್ನು ನಿರೂಪಿಸಿದರು. ಹಾಗೂ ವಿದ್ಯಾರ್ಥಿ ಮಹಮ್ಮದ್ ಹಾಶಿಮ್ ಸ್ವಾಗತಿಸಿದರು. ಮೊಹಮ್ಮದ್ ಝಿಶಾನ್ ಧನ್ಯವಾದವಿತ್ತರು.











