37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

ಬೆಳ್ತಂಗಡಿ : 77 ನೇ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ “ಸಂವಿಧಾನ ಮೌಲ್ಯಗಳ ರಕ್ಷಣೆ – ಗಣರಾಜ್ಯ ಸಂಭ್ರಮ” ಎಂಬ ಘೋಷ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮವು ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು.

ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ರವರು ಧ್ವಜಾರೋಹಣ ನೆರವೇರಿಸಿ ಮಾತಾಡಿ, ಗಣರಾಜ್ಯೋತ್ಸವ ದಿನಾಚರಣೆಯ ಭಾಗವಾಗಿ ದೇಶ ಹಾಗೂ ದೇಶದ ಬಡಜನತೆ, ಶೋಷಿತರು ಉಳಿಯಬೇಕಾದರೆ, ಸಂವಿಧಾನವನ್ನು ಉಳಿಸಬೇಕು. ಸಂವಿಧಾನ ಪೂರ್ವದಲ್ಲಿ ಇಲ್ಲದ ಹಕ್ಕುಗಳು ಸಂವಿಧಾನ ಜಾರಿಯ ನಂತರ ಹಲವಾರು ಹಕ್ಕುಗಳು ಸಿಕ್ಕಿದೆ. ಸಂವಿಧಾನವನ್ನು ಉಳಿಸಲು ನಾವೆಲ್ಲರೂ ತಯಾರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ನೂತನ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಹಾಗೂ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಕಾರ್ಯಕ್ರಮನ್ನು ಉದ್ದೇಶಿಸಿ ಅತಿಥಿ ಮಾತುಗಳನ್ನಾಡಿದರು.

2026-28ರ ಅವಧಿಗೆ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾದ ಅಲ್ಫೋನ್ಸ್ ಫ್ರಾಂಕೋ ರವರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರು ಇನಾಸ್ ರೋಡ್ರಿಗಾಸ್, ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರ. ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಜಿಲ್ಲಾ ಸಮಿತಿ ಸದಸ್ಯರು ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಹಾಗೂ ಬ್ಲಾಕ್ ನಾಯಕರು, ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅಶ್ಫಾಕ್ ಪುಂಜಾಲಕಟ್ಟೆ ನಿರೂಪಿಸಿ ಧನ್ಯವಾದ ಮಾಡಿದರು.

Related posts

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya
error: Content is protected !!