September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಉಜಿರೆಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮವವು ಸಂಭ್ರಮದಿಂದ ನಡೆಯಿತು.

ಭಾರತೀಯ ನೌಕಾದಳದ ನಿವೃತ್ತ ಲೆಫ್ಟಿನೆಂಟ್ ಕಮಾಂಡರ್ ಭರತ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ. ಕಾಲೇಜಿನ ಎನ್.ಸಿ.ಸಿ. ಕೆಡೆಟ್ಸ್, ಎನ್.ಸಿ.ಸಿ. (ಆರ್ಮಿ) ಅಧಿಕಾರಿ ಲೆಫ್ಟಿನೆಂಟ್ ಡಾ. ಭಾನುಪ್ರಕಾಶ್ ಮಾರ್ಗದರ್ಶನದಲ್ಲಿ, ರೋವರ್ಸ್ ಆ್ಯಂಡ್ ರೇಂಜರ್ಸ್ ತಂಡದ ಬ್ಯಾಂಡ್ ಹಿನ್ನೆಲೆಯೊಂದಿಗೆ ಆಕರ್ಷಕ ಪಥಸಂಚಲನ ನಡೆಸಿದರು. ಕಲಾಕೇಂದ್ರದ ವಿದ್ಯಾರ್ಥಿಗಳು ರಾಷ್ಟ್ರಗೀತೆ, ದೇಶಭಕ್ತಿಗೀತೆ ಹಾಡಿದರು.
ಬಳಿಕ ಸ್ತಬ್ಧಚಿತ್ರ ಪ್ರದರ್ಶನ ನಡೆಯಿತು.

ಭಾರತದ ಜಾನಪದ ವೈಭವ, ಕೇರಳ ಸಂಸ್ಕೃತಿಯ ವಿಶೇಷತೆ, ಆಪರೇಷನ್ ಸಿಂದೂರದ ವಿವರ, ವಂದೇ ಮಾತರಂ ಗೀತೆಯ ಜೊತೆಗಿನ ಸತ್ವಯುತ ಮೌಲ್ಯ, ವಿಜ್ಞಾನ ಮತ್ತು ತಂತ್ರಜ್ಞಾನದ ನಿಖರ ಸಾಧನೆಯ ವಿವರಗಳನ್ನು ವಿವಿಧ ಪ್ರದರ್ಶನಗಳು ಬಿಂಬಿಸಿದವು.

ಸ್ಥಳೀಯ ವಿವಿಧ ಎಸ್.ಡಿ.ಎಂ. ಶಾಲಾ ಕಾಲೇಜುಗಳ ಪ್ರಾಂಶುಪಾಲರು, ವಿಭಾಗಗಳ ಮುಖ್ಯಸ್ಥರು, ಬೋಧಕ- ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಎನ್.ಎಸ್.ಎಸ್. ಸ್ವಯಂಸೇವಕರು, ಕ್ರೀಡಾವಿಭಾಗದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆಯ ವಿವರಗಳನ್ನು ಪ್ರಸ್ತುತಪಡಿಸಲಾಯಿತು.

ಸ್ತಬ್ದಚಿತ್ರಗಳಲ್ಲಿ, ಶ್ರೀ ಸಿದ್ದವನ ಗುರುಕುಲದ ತಂಡ ಹಾಗೂ ಪಾಲಿಟೆಕ್ನಿಕ್ ಕಾಲೇಜು ತಂಡ ಕ್ರಮವಾಗಿ ಪ್ರಥಮ, ದ್ವಿತೀಯ ಬಹುಮಾನ ಪಡೆದವು. ಅತಿಥಿಗಳು ಬಹುಮಾನ ವಿತರಿಸಿದರು.

Related posts

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಮಡಂತ್ಯಾರು : ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ವತಿಯಿಂದ ಆಟಿಡೊಂಜಿ ದಿನ ಕೆಸರ್ದ ಗೊಬ್ಬು

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya
error: Content is protected !!