March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ಇಲ್ಲಿನ ಗಣರಾಜ್ಯ ದಿನ ಪಥ ಸಂಚಾಲನದ ಮೂಲಕ ಬಹಳ ವಿಜೃಂಭಣೆಯಿಂದ ನಡೆಯಿತು.

ವೇಣೂರು ಶ್ರೀ ರಾಮ ಭಜನಾ ಮಂದಿರ ದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಪಥ ಸಂಚಲನದ ಮಾಡುದರ ಮೂಲಕ ದೇಶಕ್ಕೆ ಗೌರವ ಸಲ್ಲಿಸಲಾಯಿತು. ನಂತರ ಶಾಲೆಯಲ್ಲಿ ಶಾಲಾ ಪೂರ್ವ ಪ್ರಾಥಮಿಕ ಮುಖ್ಯ ಶಿಕ್ಷಕಿ ಶೋಭಾ ಎಲ್ ಎನ್ ,ಶಾಲಾ ಸಂಸ್ಥಾಪಕ ಗಿರೀಶ್ ಕೆ ಎಚ್ ಮತ್ತು ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಧ್ವಜರೋಹಣ ನೆರವೇರಿಸಿದರು.

ಪ್ರೌಢಶಾಲಾ ವಿಭಾಗದ ಸಮಾಜ ಶಿಕ್ಷಕಿ ಕುಮಾರಿ ಅನುಷಾ ದಿನದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ , ಕುಂಭಶ್ರೀ ಪದವಿಪೂರ್ವ ಕಾಲೇಜಿನ ಆಡಳಿತ ಅಧಿಕಾರಿ ಮನೋಜ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶುಭ ನಿತೇಶ್, ಉಪನ್ಯಾಸಕರು ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಶರಣ್ಯ ನಿರೂಪಿಸಿದರು . ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ ಮಗಳ ವಿವಾಹದ ಪ್ರಯುಕ್ತ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ನೀಡಲಾಯಿತು.

Related posts

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya
error: Content is protected !!