ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

ಬೆಳ್ತಂಗಡಿ: ದೇಶಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಉದ್ಯಾನವನವನ್ನು ನಿರ್ಮಿಸಲಾಗಿದೆ. ವಿವಿಧ ಕಾಮಗಾರಿಗಳ ಲೋಕಾರ್ಪಣೆಗೊಳಿಸುವ ಮೂಲಕ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಪ್ರೇರಣೆದಾಯಕ ಕಾರ್ಯ ಮಾಡಿದೆ. ಸಮಾಜಮುಖಿ ಕಾರ್ಯವನ್ನು ಹೇಗೆ ಮಾಡಬಹುದು ಎಂಬುದುನ್ನು ತೋರಿಸಿಕೊಟ್ಟಿರುವ ಮಡಂತ್ಯಾರು ಗ್ರಾಮ ಪಂಚಾಯತ್ ಕಾರ್ಯ ಶ್ಲಾಘನೀಯ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಜ.27 ರಂದು ಮಡಂತ್ಯಾರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗಾಂಧಿ ಗ್ರಾಮ ಹಾಗೂ ಅಮೃತ ಗ್ರಾಮ ಪಂಚಾಯತ್ ಪುರಸ್ಕೃತ ಮಡಂತ್ಯಾರು ಗ್ರಾಮ ಪಂಚಾಯತ್ ನ ಅಮೃತ ಉದ್ಯಾನವನ, ಸಂಜೀವಿನಿ ಕಟ್ಟಡ, ಗ್ರಾಮ ಪಂಚಾಯತ್ ಕಲಿಕಾ ಕೇಂದ್ರ, ಬಸವನಗುಡಿ ಜಲ ಜೀವನ್ ಮಿಷನ್ ಕಾಮಗಾರಿ, ಕುಂಜತ್ತೋಡಿ ಶಾಲಾ ಶೌಚಾಲಯ, ಹಚ್ಚಬೆ, ಪಂದೆಜಿಲ, ಮಡಂತಡೆ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ/ ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ
ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ನವೀನ್ ಕೊಡ್ಲಕ್ಕೆ, ಉಪಾಧ್ಯಕ್ಷ ಗೋಪಾಲಕೃಷ್ಣ, ಕುಕ್ಕಳ, ಸದಸ್ಯರು, ಮಾಲಾಡಿ ಗ್ರಾ.ಪಂ.ಅಧ್ಯಕ್ಷ ಪುನೀತ್ ಕುಮಾರ್, ಮಡಂತ್ಯಾರು ಸಿಎ ಬ್ಯಾಂಕ್ ಅಧ್ಯಕ್ಷ ಜೋಯಲ್ ಮೆಂಡೆನ್ಸಾ, ಉಪಾಧ್ಯಕ್ಷ ಕಾಂತಪ್ಪ, ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಉಪಾಧ್ಯಕ್ಷ ಯೋಗೀಶ್ ಕಡ್ತಿಲ, ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ ಭಟ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ ಸಹಿತ ಮತ್ತಿತರು ಉಪಸ್ಥಿತರಿದ್ದರು.

Related posts

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya
error: Content is protected !!