September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ವಲಯ ಘಟಕ ಅಶೋಕನಗರ ಧರ್ಮಸ್ಥಳದಲ್ಲಿ 77ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು. ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ. ಇವರು ದೀಪ ಬೆಳಗಿಸಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶುಭಹಾರೈಸಿದರು.

ಮಡಂತ್ಯಾರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕುಕ್ಕಳ ಮಾತನಾಡಿ ಸಂವಿಧಾನದ ಪ್ರಮುಖ ಆಶಯಗಳಲ್ಲೊಂದಾದ ಭ್ರಾತೃತ್ವ ಪದವನ್ನು ಸರಿಯಾಗಿ ಅರ್ಥೈಸಿಕೊಂಡು ಎಲ್ಲರೂ ಸಹೋದರತೆಯಿಂದ ಬದುಕಿದಲ್ಲಿ ಸಮಾಜದಲ್ಲಿ ಯಾವುದೇ ಸಮಸ್ಯೆಗಳು ಸೃಷ್ಠಿಯಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಸಂವಿಧಾನ ನಮಗೆ ಕೇವಲ ಹಕ್ಕುಗಳನ್ನು ಮಾತ್ರ ತಿಳಿಸಿಲ್ಲ ಜೊತೆಯಲ್ಲಿ ಕರ್ತವ್ಯಗಳನ್ನು ಕೂಡಾ ತಿಳಿಸಿದೆ. ಈ ಕರ್ತವ್ಯಗಳನ್ನು ತಿಳಿದುಕೊಂಡು ಸಂವಿಧಾನಬದ್ಧವಾಗಿ ಜೀವನ ನಡೆಸಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿ ಸಂವಿಧಾನದ ಮಹತ್ವವನ್ನು ವಿವರಿಸಿದರು. ವಲಯ ಘಟಕದ ಅಧ್ಯಕ್ಷ ಗಣೇಶ್ ಡಿ. ಅಧ್ಯಕ್ಷತೆ ವಹಿಸಿ ಗಣರಾಜ್ಯೋತ್ಸವ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯ ಜೀವನದಲ್ಲಿ ಸಂವಿಧಾನದ ಮಹತ್ವವನ್ನು ಅನುಸರಿಸಬೇಕು ಎಂದು ತಿಳಿಸಿದರು.

೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಆದಿದ್ರಾವಿಡ ಸಮಾಜ ಸೇವಾ ಸಂಘದ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಕೊಕ್ಕಡ ಸಂದರ್ಭೋಚಿತವಾಗಿ ಮಾತನಾಡಿದರು. ಅಶೋಕನಗರದ ಕರಿಯ ಗುರಿಕಾರ ಹಾಗೂ ಸದಾಶಿವ ಗುರಿಕಾರ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಸಂಗೀತ ಹಾಗೂ ಜ್ಯೋತಿ ಬುದ್ಧಗೀತೆ ಹಾಡಿದರು. ಶಶಿಕಲಾ ಸ್ವಾಗತಿಸಿ, ಅನಿತಾ ಧನ್ಯವಾದವಿತ್ತರು. ಸುನೀತಾ ಡಿ.ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!