September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಮೊಗ್ರು : ದ. ಕ.ಜಿ.ಪo. ಹಿರಿಯ ಪ್ರಾಥಮಿಕ ಶಾಲೆಯ ಬುಳೇರಿಮೊಗ್ರು ಇಲ್ಲಿನ 2025-26 ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ. 26 ರಂದು ನೆರವೇರಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪದ್ಮನಾಭ ಬಿ ಇವರು ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಕಾರ್ಯಕ್ರಮ ಹಾಗೂ ವಾಚನಾಲಾಯದ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಬಂದಾರು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ, ಶಿವ ಗೌಡ ಹೇವ, ಗಂಗಾಧರ ಪೂಜಾರಿ ದoಬೆತ್ತಿಮಾರು, ಬಾಲಕೃಷ್ಣ ಗೌಡ ಮುಗೇರಡ್ಕ, ಹಾಗೂ ಉದ್ಯಮಿಗಳಾದ ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್, ಶಾಲಾ ಮುಖ್ಯೋಪಾದ್ಯಾಯರಾದ ಕರುಣಾಕರ, ಕುಪೆಟ್ಟಿ ಸಿ.ಆರ್. ಪಿ ಯವರಾದ ವಾರಿಜ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿ ಅಖಿಲಾಶ್ರೀ ಸ್ವಾಗತಿಸಿ, ಸಹ ಶಿಕ್ಷಕಿ ಆಶಾ ಕಾರ್ಯಕ್ರಮ ನಿರೂಪಿಸಿ, ಮಮತಶ್ರೀ ಧನ್ಯವಾದವಿತ್ತರು. ಮುಖ್ಯ ಶಿಕ್ಷಕರಾದ ಕೃಷ್ಣಮೂರ್ತಿ ಪ್ರಾಸ್ತವಿಕ ನುಡಿಗಳನ್ನಾಡಿದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

Related posts

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!