September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

ಬೆಳ್ತಂಗಡಿ: ವಿದ್ಯಾರ್ಥಿಗಳು ಆತ್ಮಾಭಿಮಾನವನ್ನು ಬೆಳೆಸಿಕೊಂಡು ಸಂಸ್ಕಾರಯುತವಾದ ಜೀವನ ನಡೆಸುವುದರ ಮೂಲಕ ಯಶಸ್ಸನ್ನು ಪಡೆಯುವಂತವರಾಗಬೇಕು ಎಂದು ಖ್ಯಾತ ವಾಗ್ಮಿ ದಾಮೋದರ ಶರ್ಮ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ, ಶಿಸ್ತು, ಸಾಧನೆ ವಿಷಯದ ಕುರಿತು ಸಂವಾದ ನಡೆಸುತ್ತಾ, ಜೀವನದಲ್ಲಿ ಸೋತಾಗ, ಅವಮಾನವಾದಾಗ ಕೈ ಹಿಡಿದು ನಡೆಸಿ ರಕ್ಷಿಸುವಂತಹ ಹೆತ್ತವರಿಗೆ ಗೌರವ ಕೊಟ್ಟರೆ ಪ್ರಪಂಚದಲ್ಲಿ ನಮಗೆ ಗೌರವ ಸಿಗುತ್ತದೆ. ಹರೆಯದ ಕ್ಷಣಿಕ ಆಕರ್ಷಣೆಗೆ ಬಲಿಯಾಗದೆ, ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದೆ, ಭಯ, ಆತಂಕಗಳಿಂದ ದೂರವಿದ್ದು ಸಮಾಜದಲ್ಲಿ ಗೌರವ ಪೂರ್ವಕವಾಗಿ ಬದುಕಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕ ಬೆಳಿಯಪ್ಪ ಕೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

Suddi Udaya
error: Content is protected !!