23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

ಬೆಳ್ತಂಗಡಿ : ಲಾಯಿಲ ಶ್ರೀ ರಾಘವೇಂದ್ರ ಮಠದ ಟ್ರಸ್ಟಿನ ಸಭೆಯು ಜ.೨೭ ರಂದು ಶ್ರೀ ರಾಘವೇಂದ್ರ ಮಂಟಪದಲ್ಲಿ ನಡೆಯಿತು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರವರು ಗೌರವ ಸಲಹೆಗಾರರಾಗಿ ಸರ್ವಾನುಮತದಿಂದ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣರವರು ಸ್ವಾಗತಿಸಿ ಪ್ರಸ್ತಾವಿಸಿದರು. ಕೋಶಾಧಿಕಾರಿ ಶ್ರವಣ್ ಕುಮಾರ್‌ರವರು ಲೆಕ್ಕಪತ್ರಗಳನ್ನು ಮಂಡಿಸಿದರು.


ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ಅನಾನುಕೂಲ ಆಗದಂತೆ ಪೂಜಾ ವಿಧಿ ವಿಧಾನಗಳು ಸಮಯ ಶ್ರದ್ಧೆ ಮತ್ತು ಶಿಸ್ತುನಿಂದ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದೆ. ಫೆಬ್ರವರಿ ೭ರಂದು ನಡೆಯುವ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಗೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಬೇಕೆಂದು ಅಧ್ಯಕ್ಷರಾದ ಪೀತಾಂಬರ ಹೇರಾಜೆ ಅವರು ತಿಳಿಸಿದರು.

ಉಜಿರೆ ಎಸ್‌ಡಿಎಂ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಕುಮಾರ ಹೆಗ್ಡೆಯವರನ್ನು ಟ್ರಸ್ಟಿಗೆ ನೂತನವಾಗಿ ಸೇರಿಸಲಾಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಮಹಾಬಲ ಶೆಟ್ಟಿ, ಹಿರಿಯ ಟ್ರಸ್ಟಿಗಳಾದ ಪ್ರೊ ಎ. ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಶ್ರೀಮತಿ ಉಮಾ ರಂಜನ್ ರಾವ್, ಮಂಜುನಾಥ ಶೆಟ್ಟಿ, ಕೃಷ್ಣ ಶೆಟ್ಟಿ ಹಾಗೂ ಇತರ ಪ್ರಮುಖರು ಹಾಜರಿದ್ದರು.

Related posts

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya
error: Content is protected !!