September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

ಬೆಳ್ತಂಗಡಿ (ಜ.28): ರಾಜ್ಯಾದ್ಯಂತ ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಹಲವು ದಿನಗಳಿಂದ ಗುಡಿಸಲುಗಳನ್ನು ನಿರ್ಮಿಸಿ ನೆಲೆಸಿದ್ದು, ಇದರಿಂದ ಪಂಚಾಯತ್ ಆವರಣದ ಶುಚಿತ್ವ ಹದಗೆಟ್ಟು ಗ್ರಾಮಸ್ಥರು ಹಾಗೂ ಪಂಚಾಯತ್‌ಗೆ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ವಿಷಯವನ್ನು ಈಗಾಗಲೇ ಗ್ರಾಮ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಮೂರು ದಿನಗಳೊಳಗೆ ಗುಡಿಸಲುಗಳನ್ನು ತೆರವುಗೊಳಿಸಲಾಗುತ್ತದೆ ಎಂಬ ಭರವಸೆ ನೀಡಲಾಗಿತ್ತು. ಆದರೆ ಆರು ದಿನಗಳು ಕಳೆದರೂ ಕೂಡ ಗುಡಿಸಲುಗಳನ್ನು ತೆರವುಗೊಳಿಸಲಾಗಿಲ್ಲ.ಗ್ರಾಮ ಸಭೆಯ ನಿರ್ಣಯದಂತೆ, ಗುಡಿಸಲುಗಳನ್ನು ತಕ್ಷಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಆವರಣವನ್ನು ಶುಚಿಗೊಳಿಸಬೇಕೆಂದು ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಸದಸ್ಯ ಹನೀಫ್ ಪುಂಜಾಲಕಟ್ಟೆ, ಗ್ರಾಮ ಪಂಚಾಯತ್ ಸದಸ್ಯ ಸಿದ್ದೀಕ್ ಯು.ಪಿ, ಚಾರ್ಮಾಡಿ ಬ್ರಾಂಚ್ ಅಧ್ಯಕ್ಷ ಸಫ್ವಾನ್ ಕಕ್ಕಿಂಜೆ ಹಾಗೂ ಅಶ್ರಫ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ ಎಸ್.ಐ.ಟಿ

Suddi Udaya

ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ರೂ.3.20 ಲಕ್ಷ ವಂಚನೆ ಆರೋಪ ಬೆಂಗಳೂರಿನ ಮಹಿಳೆ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!