ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು: ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪಂಚಾಯತ್ ಸಿಬ್ಬಂದಿಗಳಾದ ಪೂರ್ಣಿಮಾ, ಡೀಕಯ್ಯ, ಭುವನೇಶ್, ಶ್ರೇಷ್ಠ, ನಾಗಾಂಬಿಕಾ ಸಂಜೀವಿನಿ ಮಹಿಳಾ ಒಕ್ಕೂಟ ಬೆಳಾಲು ಇದರ ಅಧ್ಯಕ್ಷೆ ಶಾರದಾ, ಕಾರ್ಯದರ್ಶಿ ಉಮಾದೇವಿ, ಪದಾಧಿಕಾರಿಗಳು ಪ್ರೇಮ, ಎಂ.ಬಿ.ಕೆ ಹರಿಣಾಕ್ಷಿ, ಎಲ್.ಸಿ.ಆರ್.ಪಿ ಸರಸ್ವತಿ, ಕೃಷಿ ಸಖಿ ಸ್ವಾತಿ ಹಾಗೂ ಸ್ವಚ್ಛ ಘಟಕದ ಸಿಬ್ಬಂದಿಗಳಾದ ಸುಂದರಿ ಮಾಯಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ಕೆ ನಾಗರಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಾಗರಿಕರು ರಸ್ತೆ ಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಸ ಕಡ್ಡಿ ಬಿಸಾಡದೆ ಸ್ವಚ್ಛತೆಯ ಬಗ್ಗೆ ಜಾಗೃತರಾಗಿರಬೇಕೆನ್ನುವ ಸಂದೇಶವನ್ನು ನಾಗರಿಕರಲ್ಲಿ ಅರಿವು ಮೂಡಿಸಲಾಯಿತು.

Related posts

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya
error: Content is protected !!