September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ತನಿಖೆ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ ಸಚಿವ ಪರಮೇಶ್ವರ್ ಜಿ. ರವರಿಗೆ ಆಗ್ರಹಿಸಿದರು.

ಸುಮಂತ್‌ನ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯ ಸಾರ್ವಜನಿಕರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ನಡೆಯದಂತೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಶೀಘ್ರದಲ್ಲೇ ನಿಖರವಾದ ಸತ್ಯವನ್ನು ಜನರ ಮುಂದಿಡಬೇಕು ಎಂದು ಒತ್ತಾಯಿಸಲಾಗಿದೆ.

ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಪೊಲೀಸ್ ಇಲಾಖೆ ನಿರಪೇಕ್ಷ ಹಾಗೂ ಪಾರದರ್ಶಕ ತನಿಖೆ ನಡೆಸಬೇಕೆಂಬ ನಿರೀಕ್ಷೆ ವ್ಯಕ್ತವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅವರ ಮಾರ್ಗದರ್ಶನದ ಪೊಲೀಸರ ತಂಡಗಳು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Related posts

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

Suddi Udaya

ಮುಂಡಾಜೆ: ಮದಿಮಾಲ್ ಕಟ್ಟೆ ಜಾನಕಿ ರವರ ಮನೆಯಲ್ಲಿ ಪಾದಾಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!