37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ 2026ನೇ ಸಾಲಿನ ಪ್ರಥಮ ಸಾಮಾನ್ಯ ಸಭೆಯು ಜ. 27 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು.

2025ರ ಆಯವ್ಯಯವನ್ನು ಮಂಜೂರುಗೊಳಿಸಲಾಯಿತು. ನೂತನ ಮುಂಗಡ ಪತ್ರ, ವಾರ್ಷಿಕ ಕ್ರಿಯಾಯೋಜನೆಯನ್ನು ಸಿದ್ದಗೊಳಿಸಲಾಯಿತು. ಘಟಕ ಪತ್ರಿಕೆ ಕಪಿಲಾ ವಾಣಿಯ ಸಂಪಾದಕರಾದ ಜಸ್ವಂತ್ ಪಿರೇರಾ ಅವರು ಸಂಚಿಕೆಗಳ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕೆ ಶ್ರೀಧರ ರಾವ್ ಅವರು ಮಾರ್ಗದರ್ಶನ ನೀಡಿದರು. ಪೂರ್ವಾಧ್ಯಕ್ಷರಾದ ಸಂತೋಷ್ ಜೈನ್, ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ರೇಷ್ಮಾ ಡಿ ಅಲ್ಮೇಡಾ, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ, ದಕ್ಷಾ ಜೈನ್, ನಿಕಟಪೂರ್ವ ಅಧ್ಯಕ್ಷರಾದ ಡಾ. ಶೋಭಾ ಪಿ. ಅವರು ಚರ್ಚೆಯಲ್ಲಿ ಭಾಗವಹಿಸಿದರು.

ಅಕ್ಷತ್ ರೈ ಅವರು ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ವಾಚಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ವಂದಿಸಿದರು.

Related posts

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!