23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

ವೇಣೂರು: ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 11ನೇ ವರ್ಷದ ಜಾತ್ರಾ ಮಹೋತ್ಸವವು ಫೆ.4 ಮತ್ತು ಫೆ.5ರಂದು ವಿಜೃಂಭಣೆಯಿಂದ ಜರುಗಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ತಿಳಿಸಿದ್ದಾರೆ.

ಫೆ.4 ರಂದು ರಾತ್ರಿ ವಾಸ್ತುಪೂಜೆ, ವಾಸ್ತುಹೋಮ, ದಿಕ್‌ಬಲಿ ಹಾಗೂ 11 ನೇ ವರ್ಷದ ಜಾತ್ರಾ ಮಹೋತ್ಸವ ಮತ್ತು ಮಹಾಚಂಡಿಕಾಯಾಗ, ಬೆಳಿಗ್ಗೆ ಬ್ರಹ್ಮ,ವಿಷ್ಣು ಹಾಗೂ 9 ಕಾಳಿ ದೇವತೆಗಳ ಮೂರ್ತಿ ಅನಾವರಣ ನಡೆಯಲಿದೆ.
ಜ.5 ರಂದು ಬೆಳಗ್ಗೆ ನಾಗಬನದಲ್ಲಿ ಶ್ರೀ ನಾಗದೇವರಿಗೆ ತಂಬಿಲ, ಶ್ರೀ ದುರ್ಗಾದೇವಿ ಗುಡಿಯಲ್ಲಿ ಚಂಡಿಕಾಯಾಗ, ಪಂಚಾಮೃತ ಅಭಿಷೇಕ, ಪಂಚವಿಂಶತಿ ಕಲಶ, ಪಲ್ಲಪೂಜೆ, ಆದಿವಾಸ ಹೋಮ, ತುಲಾಭಾರ ಸೇವೆ, ಭಜನಾ ಕಾರ್ಯಕ್ರಮ, ವಿಶೇಷ ರಂಗಪೂಜೆ ಮತ್ತು ಮಹಾಪೂಜೆ ಪರಿವಾರ ದೈವಗಳ ಗಗ್ಗರಸೇವೆ, ಮೈಸಂದಾಯ, ದುಗಲಾಯ, ಪಂಜುರ್ಲಿ, ಮಂತ್ರದೇವತೆ, ಮೈಯಂತಿ, ಮಂತ್ರದೇವತೆ, ಸನ್ಯಾಸಿ ಗುಳಿಗ, ಕೊರಗಜ್ಜ ದೈವಗಳ ಗಗ್ಗರಸೇವೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ.

ರಾತ್ರಿ ನವ ಗುಳಿಗಗಳ ವಿಶೇಷ ಗಗ್ಗರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.

ನವಗುಳಿಗಗಳ ಗಗ್ಗರ ಸೇವೆ ವಿಶೇಷ: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 11ನೇ ವರ್ಷದ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು, ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ವಿಶೇಷವಾಗಿ ನವ ಗುಳಿಗ ದೈವಗಳ ಗಗ್ಗರ ಸೇವೆ ಹಾಗೂ ಪರಿವಾರ ದೈವಗಳ ಗಗ್ಗರ ಸೇವೆ ನಡೆಯಲಿದೆ. ಕ್ಷೇತ್ರದಲ್ಲಿ ಭಕ್ತರಿಗೆ ಎರಡು ದಿನವು ಅನ್ನಸಂತರ್ಪಣೆ ಸೇವೆ ನಡೆಯಲಿದೆ. ಊರ, ಪರವೂರ ಸರ್ವರೂ ಕೂಡ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ತಿಳಿಸಿದರು.

ರಂಗ ಮಂಟಪ ಲೋಕಾರ್ಪಣೆ: ಕಳೆದ ಹಲವಾರು ವರ್ಷಗಳಿಂದ ದೇವಸ್ಥಾನದಲ್ಲಿ ನಿರಂತರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಕ್ಷೇತ್ರದ ಧರ್ಮದರ್ಶಿ ರಮೇಶ್ ಅವರು ಅವರ ಮಾತ- ಪಿತರವರ ಹೆಸರಿನಲ್ಲಿ ಸುಮಾರು ೭.೦೦ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಮತಿ ಗುಲಾಬಿ ಪೂಜಾರ್ತಿ ಮತ್ತು ದಿ.ಆದಪ್ಪ ಪೂಜಾರಿ ರಂಗಮAಟಪವು ಫೆ ೪ರಂದು ಬೆಳಿಗ್ಗೆ ವಿವಿಧ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ರಸ್ತೆ ಡಾಂಬರೀಕರಣಕ್ಕೆ ಒತ್ತಾಯ: ಬೇರೆಡೆ ಎಲ್ಲಾ ಕಡೆ ರಸ್ತೆ ಡಾಮರೀಕರಣ ಆಗಿದೆ ಆದರೆ ಬರ್ಕಜೆ ಕ್ಷೇತ್ರಕ್ಕೆ ದಿನನಿತ್ಯ ಭಕ್ತರು ಬರುವ ರಸ್ತೆ ಕಲ್ಲಣಿಯಿಂದ ಎರಡು ಕಿ.ಮೀ. ಡಾಮರೀಕರಣ ಅತೀ ಶೀಘ್ರದಲ್ಲಿ ಆಗಬೇಕಿದೆ. ಸಂಬAಧಪಟ್ಟವರಿಗೆ ಮನವಿ ಸಲ್ಲಿಸಿದ್ದರು ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಯಾರೂ ಕೂಡ ಈ ರಸ್ತೆಯ ಬಗ್ಗೆ ಯಾಕೆ ಗಮನ ನೀಡುತ್ತಿಲ್ಲ ಎಂಬುದು ಕ್ಷೇತ್ರಕ್ಕೆ ಬರುವ ಭಕ್ತರು ಕೇಳುತ್ತಿದ್ದಾರೆ. ೨೦೨೭ಕ್ಕೆ ಈ ಕ್ಷೇತ್ರದ ಬ್ರಹ್ಮಕಲಶೋತ್ಸವ ನಡೆಯಲಿದೆ. ಆದುದರಿಂದ ರಸ್ತೆ ಡಾಮರೀಕರಣ ಅನಿವಾರ್ಯವಾಗಿದೆ ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ಬರ್ಕಜೆ ಹೇಳಿದರು.

Related posts

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!