32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಗತ್ಯ ಅನುದಾನವನ್ನು ಒದಗಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು.

ಶಾಸಕರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರವು ಬೆಳ್ತಂಗಡಿ ತಾಲೂಕಿನ 14 ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡ ದುರಸ್ತಿ ಹಾಗೂ ಶೌಚಾಲಯಗಳ ಅಭಿವೃದ್ಧಿಗಾಗಿ ಒಟ್ಟು ರೂ.57.93 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದೆ.

ಈ ಅನುದಾನದಿಂದ ಶಾಲೆಗಳ ಮೂಲಭೂತ ಸೌಕರ್ಯಗಳು ಮತ್ತಷ್ಟು ಸುಧಾರಣೆಯಾಗಲಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಸುರಕ್ಷಿತ ಶಿಕ್ಷಣ ವಾತಾವರಣ ಕಲ್ಪಿಸಲು ಸಹಕಾರಿಯಾಗಲಿದೆ.ಶಾಸಕರ ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಶಿಕ್ಷಣ ಸಚಿವರಿಗೆ ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Related posts

ಅಪಘಾತದಲ್ಲಿ ಮೃತರಾದ ಪ್ರೈಸ್ ಮ್ಯಾಥ್ಯೂ ರವರಿಗೆ ಬೆಳ್ತಂಗಡಿಯಲ್ಲಿ ಅಂತಿಮ ನಮನ: ಅಂತ್ಯಸಂಸ್ಕಾರಕ್ಕಾಗಿ ಕೇರಳದ ಇರಟ್ಟಿಗೆ ಪಾರ್ಥಿವ ಶರೀರ ರವಾನೆ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!