25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ಇವರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಗ್ಯಾರಂಟಿ ಅನುಷ್ಟಾನ ಸಮಿತಿ ಕಛೇರಿಯಲ್ಲಿ ನಡೆಯಿತು.

ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮತ್ತು ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆಯನ್ನು ಪರಿಶೀಲಿಸಲಾಯಿತು.

ಸರ್ಕಾರದ ಪಂಚಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ವಿಲೇವಾರಿಗೊಳಿಸುವ ಕುರಿತು ಚರ್ಚಿಸಲಾಯಿತು. ಗೃಹಜ್ಯೋತಿ ಯೋಜನೆಯಡಿ ಉಜಿರೆ ಉಪವಿಭಾಗದಲ್ಲಿ 2025ರ ಡಿಸೆಂಬರ್ ತಿಂಗಳಲ್ಲಿ 27144 ಕುಟುಂಬಗಳಿಗೆ 1,36,67,105/- ರೂ, ಬೆಳ್ತಂಗಡಿ ಉಪವಿಭಾಗದಲ್ಲಿ 2025ರ ಡಿಸೆಂಬರ್ ತಿಂಗಳಲ್ಲಿ 44810 ಕುಟುಂಬಗಳಿಗೆ 2,66,87,140/-ರೂ ಸಹಾಯಧನ ದೊರತಿದ್ದು ತಾಲೂಕಿಗೆ ಈವರೆಗೆ 108,79,80,975/- ರೂ ಸಹಾಯಧನ ದೊರೆತಿರುವುದಾಗಿ ಅಧಿಕಾರಿಗಳು ತಿಳಿಸಿದರು.


ಗೃಹಲಕ್ಷ್ಮೀ ಯೋಜನೆಯಡಿ ಪ್ರಕೃತ 58854 ಫಲಾನುಭವಿಗಳಿದ್ದು, ಆಗಸ್ಟ್-2023 ರಿಂದ ಈವರೆಗೆ 2,61,98,60,000/-ರೂ ಸಹಾಯಧನ ದೊರೆತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.
ಅನ್ನ ಭಾಗ್ಯ ಯೋಜನೆಯಡಿ ಜನವರಿ-2026 ತಿಂಗಳಲ್ಲಿ 45613 ಪಡಿತರ ಚೀಟಿದಾರರಿಗೆ ಪ್ರತೀ ಕೆ.ಜಿ.ಗೆ ರೂಪಾಯಿ 34.00 ರಂತೆ 55,49,55,540.00ರೂಗಳ ಅನುದಾನವು ಆಗಸ್ಟ್-2023 ರಿಂದ ಈವರೆಗೆ ತಾಲೂಕಿನ ಪಡಿತರ ಚೀಟಿದಾರರಿಗೆ ದೊರೆತಿರುವುದಾಗಿ ಅಧಿಕಾರಿಗಳು ಸಭೆಗೆ ವಿವರ ನೀಡಿದರು.


ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 7172 ಫಲಾನುಭವಿಗಳಿದ್ದು, ಬೆಳ್ತಂಗಡಿ ತಾಲೂಕಿನ 1095 ಅಭ್ಯರ್ಥಿಗಳಿಗೆ 2025ರ ಜುಲೈ ತಿಂಗಳಲ್ಲಿ 24,87,000.00ರೂ.ಗಳನ್ನು ಡಿ.ಬಿ.ಟಿ ಮೂಲಕ ಸಹಾಯಧನವನ್ನು ವಿತರಿಸಲಾಗಿದ್ದು, ಆಗಸ್ಟ್-2023 ರಿಂದ 2025ರ ಜುಲೈ ತಿಂಗಳವರೆಗೆ 2,14,59,000.00ರೂ.ಗಳನ್ನು ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ.


ಶಕ್ತಿ ಯೋಜನೆಯಡಿ ಧರ್ಮಸ್ಥಳ ಘಟಕದ ಬಸ್ಸುಗಳ ಮೂಲಕ 2025ರ ಡಿಸೆಂಬರ್-2025 ತಿಂಗಳಲ್ಲಿ 769509 ಮಹಿಳಾ ಪ್ರಯಾಣಿಕರು ಯೋಜನೆಯ ಸವಲತ್ತನ್ನು ಪಡೆದಿದ್ದು, ಜೂನ್-2023 ರಿಂದ ಈವರೆಗೆ 91,17,03,258/-ರೂ. ಬಿಡುಗಡೆಯಾಗಿರುವುದಾಗಿ ಇಲಾಖಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.


ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿಯ ಸದಸ್ಯರಾದ ಶೇಖರ್ ಕುಕ್ಕೇಡಿ, ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ಸೌಮ್ಯ ಲಾಯಿಲ, ಮೆರಿಟಾ ಪಿಂಟೋ, ವಾಸುದೇವ ರಾವ್, ವಿಜಯಗೌಡ ಬೆಳಾಲು, ಶರೀಫ್ ಸಬರಬೈಲ್, ಕೆ.ನೇಮಿರಾಜ್ ಕಿಲ್ಲೂರು, ಶ್ರಿಪತಿ ಉಪಾಧ್ಯಾಯ ಮತ್ತು ವೀರಪ್ಪ ಮೊಯ್ಲಿ, ಯತೀಶ್ ಹಾಗೂ ನೋಡೆಲ್ ಅಧಿಕಾರಿಯಾದ ಹೆರಾಲ್ಡ್ ಸ್ವಿಕ್ವೇರಾ ಉಪಸ್ಥಿತರಿದ್ದರು.

Related posts

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya
error: Content is protected !!