ಮರೋಡಿ: ಶ್ರೀ ಉಮಾ ಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಫೆ.೧ರಿಂದ ಮೊದಲ್ಗೊಂಡು ಫೆ.೫ರವರೆಗೆ ವಿಜೃಂಭಣೆಯಿಂದ ಜರುಗಲಿದೆ ಎಂದು ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿರುತ್ತಾರೆ.
ಫೆ.2 ರಂದು ಬೆಳಿಗ್ಗೆ ಧಾರ್ಮಿಕ ವಿಧಿ, ಧ್ವಜಾರೋಹಣ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ, ರಾತ್ರಿ ಶ್ರೀ ವೀರಭದ್ರ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಿರಿಯಡ್ಕ ಇವರಿಂದ ಶ್ರೀ ಕ್ಷೇತ್ರ ಹಿರಿಯಡ್ಕ ಕ್ಷೇತ್ರ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನ, ದೊಡ್ಡ ರಂಗಪೂಜೆ ವ್ಯಾಘ್ರಚಾಮುಂಡಿ ಸಹಿತ ರಕ್ಷೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರಸೇವೆ, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರಣತಿ ಮತ್ತು ಪ್ರದೇಶ್ ಜೋಷಿ ಇವರಿಂದ ಜಾದೂ ಪ್ರದರ್ಶನ ಜರುಗಲಿದೆ.
ಫೆ.3 ರಂದು ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಧಾರ್ಮಿಕ ಸಭಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ, ನಂತರ ಅನ್ನಸಂತರ್ಪಣೆ, ಸಂಜೆ ಆಶ್ಲೇಷ ಬಲಿ, ರಾತ್ರಿ ನಿತ್ಯವಿಧಿ ಕವಾಟ ಬಂಧನ, ಪಟ್ಟದಪಂಜುರ್ಲಿ ಮತ್ತು ಕಲ್ಕುಡ ದೈವಗಳ ಕೋಲ, ಕುಣಿತ ಭಜನಾ, ರಾತ್ರಿ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಮನೋರಂಜನಾ ಕಾರ್ಯಕ್ರಮ ಅನ್ನಸಂತರ್ಪಣೆ ಜರುಗಲಿದೆ. ಫೆ.4ರಂದು ಬೆಳಿಗ್ಗೆ ತುಲಾಭಾರ ಸೇವೆ ದರ್ಶನಬಲಿ ಹಾಗೂ ಮಹಾ ಅನ್ನಸಂತರ್ಪಣೆ, ರಾತ್ರಿ ಸ್ಥಳೀಯ ಮಕ್ಕಳಿಂದ ಹಾಗೂ ಮಹಿಳೆಯರಿಂದ ‘ವಿವಿಧ ಮನೋರಂಜನಾ ಕಾರ್ಯಕ್ರಮ, ಶ್ರೀಕಾಂತ್ ಶೆಟ್ಟಿ ಯವರಿಂದ ಧಾರ್ಮಿಕ ಪ್ರವಚನ, ವಿಜಯ ಕುಮಾರ್ ಕೊಡಿಯಾಲ್ ಬೈಲು ನಿರ್ದೇಶನದಲ್ಲಿ ಶುಭರಾಜ್ ರಾವ್ ಕಾವೂರುರವರ ಛತ್ರಪತಿ ಶಿವಾಜಿ ತುಳು ನಾಟಕ, ಯಾತ್ರಾಹೋಮ, ರಾತ್ರಿ ಬಲಿಉತ್ಸವ, ಸಿರಿಗಳ ಚಾತ್ರೆ, ಕುಮಾರ ದರ್ಶನ, ಕೊಡಮಣಿತ್ತಾಯ ದೈವದ ನೇಮೋತ್ಸವ ದೈವದೇವರ ಭೇಟಿ, ಅವಭೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ ಕುಣಿತ ಭಜನಾ ಕಾರ್ಯಕ್ರಮ ಜರುಗಲಿದೆ.
ಅಪಾರ ಭಕ್ತರ ಆರಾಧನಾ ಕೇಂದ್ರ: ದೇವೇಂದ್ರ ಹೆಗ್ಡೆ ಕೊಕ್ರಾಡಿ
ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನವು ಆಲಡೆ ಕ್ಷೇತ್ರವಾಗಿದ್ದು, ರಾಜ್ಯದಾದ್ಯಂತ ಅಪಾರ ಭಕ್ತರ ಆರಾಧನಾ ಕೇಂದ್ರವಾಗಿದೆ. ಈ ವರ್ಷದ ವಾರ್ಷಿಕ ಆಯನ ಮತ್ತು ಸಿರಿಗಳ ಜಾತ್ರೆಯನ್ನು ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ, ಊರ ಪರವೂರ ಭಕ್ತರ ಪೂರ್ಣ ಪ್ರಮಾಣದ ಸಹಕಾರದೊಂದಿಗೆ ಸಂಪ್ರದಾಯಬದ್ಧವಾಗಿ ಆಚರಿಸಲಾಗುತ್ತಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದರು.
ಧಾರ್ಮಿಕ ಪ್ರಜ್ಞೆ ಮೂಡಿದೆ: ಜಯಂತ್ ಕೋಟ್ಯಾನ್
ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುವ ಪ್ರತಿ ಕಾರ್ಯಕ್ರಮಗಳು ಅತ್ಯಂತ ಶ್ರದ್ದೆ ಭಕ್ತಿಯಿಂದ ಕೂಡಿರುತ್ತದೆ. ಕ್ಷೇತ್ರದ ಜಾತ್ರಾ ಸಮಯದಲ್ಲಿ ಭಕ್ತರು ದೇವಸ್ಥಾನಕ್ಕೆ ಬಂದು ತಮ್ಮ ಸೇವೆ ನೀಡುತ್ತಿರುತ್ತಾರೆ. ಈ ಮೂಲಕ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಸ್ವಾವಲಂಬನೆಯ ಜತೆಗೆ ಧಾರ್ಮಿಕ ಪ್ರಜ್ಞೆ ಮೂಡಿದೆ ಎಂದು ಮರೋಡಿ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್ ಹೇಳಿದರು.











