ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನವು, ಫೆ.02ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು. ಆ ದಿನ ಬೆಳಿಗ್ಗೆ 10:00 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿಯಿಂದ ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಕಾಲ್ನಡಿಗೆ ಜಾಥ ನಡೆಯಲಿದೆ. ನಂತರ ಬಹಿರಂಗ ಸಭೆಯನ್ನು ಉದ್ದೇಶಿಸಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕರು ಪ್ರದೀಪ್ ಈಶ್ವರ್ ಮಾತನಾಡಲಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ.











