ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಪ್ರಕಾರ ಅವಕಾಶವಿದ್ದು. ವನ್ಯ ಜೀವಿ ಮಂಡಳಿಯ ಅನುಮತಿ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಯ ಅನ್ವಯ ಭೂ ಪರಿವರ್ತನೆ ಅವಶ್ಯಕತೆ ಇಲ್ಲ ಎಂದು ಬುಡಕಟ್ಟು ಸಚಿವಾಲಯ ಸ್ಪಷ್ಟತೆಯನ್ನು ಕೊಟ್ಟ ಮೇಲೂ ಕೂಡ ಅರಣ್ಯ ಇಲಾಖೆ ವಿತ್ತಂಡ ವಾದ ಮಾಡುತ್ತಿರುವುದು ವಿಪರ್ಯಾಸ.

ಜೀವನೋಪಾಯಕ್ಕಾಗಿ , ಮೇಯಿಸುವುದಕ್ಕಾಗಿ ಅರಣ್ಯವನ್ನು ಅವಲಂಬಿಸಿರುವ ಬುಡಕಟ್ಟುಗಳನ್ನು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 2 (c) ಯಲ್ಲಿ ಅರಣ್ಯವಾಸಿ ಎಂದು ಪರಿಗಣನೆ ಮಾಡಬೇಕು. ಪಟ್ಟಾ ಜಮೀನಿನಲ್ಲಿ ವಾಸವಾಗಿರುವ ಬುಡಕಟ್ಟುಗಳಿಗೆ ಇದು ಅನ್ವಯ ಆಗಲ್ಲ ಅಂತ ಅರಣ್ಯ ಇಲಾಖೆ ಹೇಳುತ್ತಿರುವುದು ಹಾಸ್ಯಾಸ್ಪದ. ಜಿಲ್ಲಾಡಳಿತ ಜನಪ್ರತಿನಿಧಿಗಳು ಜಾರಿಯಲ್ಲಿರುವ ಕಾನೂನನ್ನು ಅನುಷ್ಠಾನ ಮಾಡಲು ಮುಂದಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹರೀಶ್ ಎಳನೀರ್ ರವರು ಆಗ್ರಹಿಸಿದ್ದಾರೆ.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಳೆ (ಜು.23) ದ.ಕ.ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya
error: Content is protected !!