25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕಿನ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯನ್ನು ಜ.30 ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇಲ್ಲಿ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು ಇವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ನಡೆದು ಬಂದ ಹಾದಿಯನ್ನು ವಿವರಿಸಿದರು. ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೂಲಸ್ಥಾನ ಅಭಿವೃದ್ಧಿ ಟ್ರಸ್ಟಿನ ಅಧ್ಯಕ್ಷ ಸಂಜೀವ ಪೂಜಾರಿ ಬಿರುವ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ಕ್ಷೇತ್ರದ ಟ್ರಸ್ಟಿಯಾದ ಸುಜಿತಾ ವಿ ಬಂಗೇರ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಉಪಾಧ್ಯಕ್ಷ ಸುಂದರ ಪೂಜಾರಿ, ಯುವವಾಹಿನಿ ಬೆಳ್ತಂಗಡಿ ಇದರ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್, ಮಹಿಳಾ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷೆ ಸುಮತಿ ಪ್ರಮೋದ್, ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಬೆಳ್ತಂಗಡಿ ತಾಲೂಕು ಇದರ ಮಹಿಳಾ ಸಮಿತಿಯ ಕಾರ್ಯದರ್ಶಿ ರಾಜಶ್ರೀ ರಮಣ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಟ್ರಸ್ಟಿಯಾದ ನಾರಾಯಣ ಮಚ್ಚಿನ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರುಗಳಾದ ಸಂತೋಷ್ ಉಪ್ಪಾರ್, ಉಷಾ ಶರತ್ ಬಾರ್ಯ, ಗೋಪಾಲ ಪೂಜಾರಿ ಕೋಲಾಜೆ, ವಿಶ್ವನಾಥ್ ಪೂಜಾರಿ ದಡ್ಡಲ್ ಪಲ್ಕೆ , ಸಂತೋಷ್ ಕೆ ಸಿ ಫುದುವೆಟ್ಟು, ನಾರಾಯಣ ಪೂಜಾರಿ ಉಚ್ಚುರು ಮರೋಡಿ, ಜಯ ಪೂಜಾರಿ ನಡ, ಬಿ ಕಮಲಾಕ್ಷ ಕೋಟ್ಯಾನ್ ಬೆಳ್ತಂಗಡಿ, ಶ್ರೀ ಗುರುನಾರಾಯಣ ಸೇವಾ ಸಂಘ ಬಳೆಂಜ ಇದರ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಭಾಸ್ಕರ್ ವಿ ಎ ಬೆಳ್ತಂಗಡಿ, ಭಾಗವಹಿಸಿದ್ದರು.

ಶ್ರೀ ಕ್ಷೇತ್ರದ ಟ್ರಸ್ಟಿ ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಸಂಚಾಲಕ ನಿತ್ಯಾನಂದ ನಾವರ ಕಾರ್ಯಕ್ರಮವನ್ನು ಸಂಯೋಜಿಸಿ ನಿರೂಪಿಸಿದರು. ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷ ಎಂ ಕೆ ಪ್ರಸಾದ್ ಶಿರ್ಲಾಲು ಧನ್ಯವಾಧವಿತ್ತರು.

Related posts

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya
error: Content is protected !!