September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಜ.29 ರಂದು ಬಿಡುಗಡೆಗೊಳಿಸಿ ಬ್ರಹ್ಮಕಲಶೋತ್ಸವದ ಯಶಸ್ವಿಗೆ ನಮ್ಮ‌ ಸಂಪೂರ್ಣ ಸಹಕಾರವಿದೆ ಎಂದರು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡ್ವೆಟ್ನಾಯ ಮಾತನಾಡಿ ಕೀರ್ತಿಶೇಷ ವಿಜಯರಾಘವ ಪಡ್ವೆಟ್ನಾಯ ಅವರ ಕನಸಿನಂತೆ ರಾಜಗೋಪುರ ಲೋಕಾರ್ಪಣೆಗೆ ಸಿದ್ದವಾಗಿದೆ. ಊರ, ಪರವೂರ ದಾನಿಗಳ, ಕಾರ್ಯಕರ್ತರ ಸಹಕಾರದಿಂದ ಬೇರೆ ಬೇರೆ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದರು.

ರಾಜಗೋಪುರ ಸಮಿತಿ ಅಧ್ಯಕ್ಷ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಎಲ್ಸಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಪ್ರತಾಪಸಿಂಹ ನಾಯಕ್ ವಹಿಸಿದ್ದರು.

ವೇದಿಕೆಯಲ್ಲಿ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರಾದ ಡಾ.ಸತೀಶ್ಚಂದ್ರ ಎಸ್, ರಾಜಗೋಪುರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಕೆ.ಮೋಹನ್ ಕುಮಾರ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್, ನಾಲ್ವಿಕೆಯವರಾದ ಶಿವರಾಮ ಪಡ್ವೆಟ್ನಾಯ, ಅನಂತ ಮೋಹನ ಮೂಡಣ್ಣಾಯ ಉಪಸ್ಥಿತರಿದ್ದರು.

ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಸ್ವಾಗತಿಸಿದರು. ಎಸ್.ಡಿ.ಎಂ ಕಾಲೇಜಿನ ಉಪನ್ಯಾಸಕ ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ಶೆಟ್ಟಿ ಬಳಂಜ ವಂದಿಸಿದರು.

Related posts

ಮೊಬೈಲ್ ಸಂಭಾಷಣೆಯನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಬಗ್ಗೆ ದೂರು

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya
error: Content is protected !!