September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ “ಭಾಸ್ಕರ ಪರ್ವ” ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಳೆ (ಶನಿವಾರ) ಬೆಳಗ್ಗೆ 10 ಗಂಟೆಗೆ, ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ.

ಸಮಾರಂಭದ ಉದ್ಘಾಟನೆಯನ್ನು ಹಾಗೂ ಅಭಿನಂದನಾ ಗ್ರಂಥದ ಬಿಡುಗಡೆಯನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ ಚಂದ್ರ ಎಸ್. ಅವರು ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಕ್ಷ್ಯಚಿತ್ರದ ಬಿಡುಗಡೆಯನ್ನು ಕ್ಷೇಮವನ, ಬೆಂಗಳೂರು ಇದರ ಕಾರ್ಯ ನಿರ್ವಾಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಅವರು ನೆರವೇರಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ ಅವರು ವಹಿಸಲಿದ್ದಾರೆ. ಸಮಾರಂಭದಲ್ಲಿ ಉಜಿರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಉಪಸ್ಥಿತರಿರಲಿದ್ದಾರೆ.

Related posts

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ತೆಕ್ಕಾರಿನ ಗುರುಕಿರಣ್ ಆಯ್ಕೆ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya
error: Content is protected !!