25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

ಬೆಳ್ತಂಗಡಿ: ಪಿ.ಎಂ. ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನ ಹಾಗೂ ಕೌಶಲ್ಯಗಳನ್ನು ವೃದ್ಧಿಸುವ ಉದ್ದೇಶದಿಂದ ಜ.29 ರಂದು ವಿದ್ಯಾರ್ಥಿಗಳ ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು.

ಈ ಮೇಳಕ್ಕೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರು ದೀಪ ಪ್ರಜ್ವಲಿಸುವುದರ ಮೂಲಕ ಅಧಿಕೃತ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ಬಸವಲಿಂಗಪ್ಪ ಟಿ.ಬಿ, ಶಿಕ್ಷಣ ಸಂಯೋಜಕ ಸಿದ್ದಲಿಂಗಸ್ವಾಮಿ, ಬೆಳ್ತಂಗಡಿ ಕ್ಲಸ್ಟರ್‌ನ ಸಿ.ಆರ್.ಪಿ ಯವರಾದ ವಾರಿಜಾ, ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಆರತಿ, ಶಾಲಾ ಮುಖ್ಯ ಶಿಕ್ಷಕ ಸೂರ್ಯನಾರಾಯಣ ಪಿ. ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳು ಸ್ವಯಂ ತಯಾರಿಸಿದ ಅಗತ್ಯ ವಸ್ತುಗಳು, ತರಕಾರಿಗಳು ಹಾಗೂ ವಿವಿಧ ತಿಂಡಿ-ತಿನಿಸುಗಳನ್ನು ಪ್ರದರ್ಶಿಸಿ ಮಾರಾಟ ನಡೆಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಆಗಮಿಸಿ ಗ್ರಾಹಕರಾಗಿ ವಿದ್ಯಾರ್ಥಿಗಳಿಂದ ವಸ್ತುಗಳನ್ನು ಖರೀದಿಸುವ ಮೂಲಕ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ನೀಡಿದರು.


ಈ ಮೇಳದ ಮೂಲಕ ವಿದ್ಯಾರ್ಥಿಗಳು ಹಣಕಾಸು ವ್ಯವಹಾರ, ಲೆಕ್ಕಾಚಾರ, ಸಂವಹನ ಕೌಶಲ್ಯ ಮತ್ತು ಸ್ವಾವಲಂಬನೆಯ ಮಹತ್ವವನ್ನು ಪ್ರಾಯೋಗಿಕವಾಗಿ ಅನುಭವಿಸಿದರು. ವಿದ್ಯಾರ್ಥಿಗಳ ಆತ್ಮವಿಶ್ವಾಸ, ಉದ್ಯಮಶೀಲತೆ ಹಾಗೂ ಜೀವನೋಪಯೋಗಿ ಕೌಶಲ್ಯಗಳನ್ನು ಬೆಳೆಸುವಲ್ಲಿ ಮೆಟ್ರಿಕ್ ಮೇಳವು ಅತ್ಯಂತ ಯಶಸ್ವಿಯಾಯಿತು.

Related posts

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಸಿನರ್ಜಿ” ವಿಭಾಗ ವಿದ್ಯಾರ್ಥಿ ವೇದಿಕೆಯ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!