ಉಜಿರೆ: ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಜ.29 ರಂದು ಬಿಡುಗಡೆಗೊಳಿಸಿ ಬ್ರಹ್ಮಕಲಶೋತ್ಸವದ ಯಶಸ್ವಿಗೆ ನಮ್ಮ ಸಂಪೂರ್ಣ ಸಹಕಾರವಿದೆ ಎಂದರು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡ್ವೆಟ್ನಾಯ ಮಾತನಾಡಿ ಕೀರ್ತಿಶೇಷ ವಿಜಯರಾಘವ ಪಡ್ವೆಟ್ನಾಯ ಅವರ ಕನಸಿನಂತೆ ರಾಜಗೋಪುರ ಲೋಕಾರ್ಪಣೆಗೆ ಸಿದ್ದವಾಗಿದೆ. ಊರ, ಪರವೂರ ದಾನಿಗಳ, ಕಾರ್ಯಕರ್ತರ ಸಹಕಾರದಿಂದ ಬೇರೆ ಬೇರೆ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದರು.
ರಾಜಗೋಪುರ ಸಮಿತಿ ಅಧ್ಯಕ್ಷ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಶುಭ ಕೋರಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಎಲ್ಸಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಪ್ರತಾಪಸಿಂಹ ನಾಯಕ್ ವಹಿಸಿದ್ದರು.
ವೇದಿಕೆಯಲ್ಲಿ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರಾದ ಡಾ.ಸತೀಶ್ಚಂದ್ರ ಎಸ್, ರಾಜಗೋಪುರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಕೆ.ಮೋಹನ್ ಕುಮಾರ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್, ನಾಲ್ವಿಕೆಯವರಾದ ಶಿವರಾಮ ಪಡ್ವೆಟ್ನಾಯ, ಅನಂತ ಮೋಹನ ಮೂಡಣ್ಣಾಯ ಉಪಸ್ಥಿತರಿದ್ದರು.
ಆಡಳಿತ ಮೊಕ್ತೇಸರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ಸ್ವಾಗತಿಸಿದರು. ಎಸ್.ಡಿ.ಎಂ ಕಾಲೇಜಿನ ಉಪನ್ಯಾಸಕ ಡಾ. ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ಶೆಟ್ಟಿ ಬಳಂಜ ವಂದಿಸಿದರು.











