Uncategorizedಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

ಬೆಳ್ತಂಗಡಿ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತಮ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬೆಳ್ತಂಗಡಿ ಗುರುಸಾನ್ನಿಧ್ಯ ಸಭಾಂಗಣದಲ್ಲಿ ಶ‌ನಿವಾರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ ಪತ್ರಕರ್ತರು ಸಮಾಜವನ್ನು ತಿದ್ದುವ ಕಾರ್ಯವನ್ನು ಮಾಡಬೇಕಾಗಿದೆ ಸಮಾಜದಲ್ಲಿ ಬದಲಾವಣೆಗಳನ್ನು ತರಲು ಪತ್ರಕರ್ತರು ಶ್ರಮಿಸಬೇಕು ಎಂದ ಅವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನ ಖರೀದಿಗೆ ಶಾಸಕರ ನಿಧಿಯಿಂದ ರೂ 20 ಲಕ್ಷ ಅನುದಾನ ನೀಡುವುದಾಗಿ ತಿಳಿಸಿದರು. ಅಲ್ಲದೆ ಕೇಂದ್ರ ಸರ್ಕಾರದಿಂದ ಜಾರಿಯಾದ ಅಂಚೆ ವಿಮಾ ಯೋಜನೆಯಲ್ಲಿ ತಾಲೂಕಿನ ಪತ್ರಕತ೯ರಿಗೆ ವಿಮೆ ಮಾಡಲು ಕಂತಿನ ಹಣವನ್ನು ವೈಯಕ್ತಿಕ ನೆಲೆಯಲ್ಲಿ ನೀಡುವುದಾಗಿ ಭರವಸೆಯಿತ್ತರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ ಬಿ.ಎನ್. ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ, ಪ್ರತಿ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡಿ ಸರ್ಕಾರದ ಸೌಲಭ್ಯಗಳನ್ನು ಬಡ ಜನರಿಗೆ ಒದಗಿಸುವಲ್ಲಿ ಪತ್ರಕತ೯ರ ಸಂಘ ಈ ಬಾರಿಯೂ ಕಾಯ೯ಕ್ರಮ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ಇಂದಾಜೆ ಮಾತನಾಡಿ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು. ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ತುಕಾರಾಮ ಮಾತನಾಡಿ ಸಂಘದ ನೂತನ ಯೋಜನೆಯನ್ನು ಪ್ರಕಟಿಸಿದರು.

ಮಾಜಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ತನ್ನ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ.ಪೂಜಾರಿ, ಜಿಲ್ಲಾ ಕಾಯ೯ಕಾರಿ ಸಮಿತಿ ಸದಸ್ಯ ಭುವನೇಶ್, ನೂತನ ಕಾರ್ಯದರ್ಶಿ ಮನೋಹರ ಬಳಂಜ, ಜಿಲ್ಲಾ ಕಾರ್ಯದರ್ಶಿ ಸಿದ್ದೀಕ್ ನೀರಾಜೆ ಉಪಸ್ಥಿತರಿದ್ದರು. ಸಂಘದ ಸದಸ್ಯ ಬಿ.ಎಸ್ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅಚುಶ್ರೀ ಸಂದೇಶ ವಾಚಿಸಿದರು.

ಸಂತೋಷ್ ಪಿ.ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.ಕಾರ್ಯದರ್ಶಿ ಮನೋಹರ ಬಳಂಜ ಧನ್ಯವಾದವಿತ್ತರು.ಸಂಘದ ಪದಾಧಿಕಾರಿಗಳು, ಸದಸ್ಯರು,ತಾಲೂಕಿನ ವಿವಿಧ ಸಂಘ ಸಂಸ್ಥೆಯವರು, ನಾಗರಿಕರು ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!