ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಕಾಲೇಜು: ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಪ್ರಜ್ಞಾವಂತ ನಾಗರಿಕರು ಮಾಡುವ ಮತದಾನ ದೇಶದಲ್ಲಿ ಉನ್ನತವಾದ ಅಭಿವೃದ್ಧಿಗೆ ನಾಂದಿಯಾಗುತ್ತದೆ ಎಂದು ಬೆಳ್ತಂಗಡಿಯ ವಕೀಲೆ ಕುಮಾರಿ ಪ್ರತೀಕ್ಷಾ ಹೇಳಿದರು.

ಅವರು ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಮತ್ತು ವಾಣಿ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತ ಆಶಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನಾವು ಮಾಡುವ ಮತದಾನದಿಂದ ದೇಶದಲ್ಲಿ ನಿರ್ದಿಷ್ಟ ಬದಲಾವಣೆಯನ್ನು ತರಬಹುದು. ಹದಿನೆಂಟು ವರ್ಷ ತುಂಬಿರುವ ವಿದ್ಯಾರ್ಥಿಗಳು ಮತದಾರ ಚೀಟಿಯನ್ನು ಮಾಡಿಕೊಂಡು ಮತದಾನದ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಬೇಕು. ಮತದಾನ ಎಂದರೆ ನಾವು ದೇಶದೊಡನೆ ಮಾಡುವ ಒಪ್ಪಂದವಾಗಿದೆ. ಮತದಾನದ ಕರ್ತವ್ಯವನ್ನು ನಿಭಾಯಿಸುವುದರಿಂದ ಭ್ರಷ್ಟಾಚಾರವನ್ನು ನಿಯಂತ್ರಿಸಲು ಸಾಧ್ಯವಿದೆ ಎಂದರು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಎಸ್. ಲೋಬೊ ಕಾರ್ಯಕ್ರಮ ಉದ್ಘಾಟಿಸಿದರು. ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಕೋಶಾಧಿಕಾರಿ ಮಮ್ತಾಜ್ ಬೇಗಂ, ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಅಭ್ಯುದಯ್ ಸ್ವಾಗತಿಸಿದರು. ಮೀನಾಕ್ಷಿ ಎನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!