September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.6: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ. ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಲಿದೆ.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಲೆ ಮತ್ತು ಕುತ್ತಿಗೆಯ ಆಂಕೊಸರ್ಜನ್, ಕಿವಿ-ಮೂಗು-ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್ ರೋಗ ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, ಒಳರೋಗಿ ವಿಭಾಗದ ಶುಲ್ಕ ಮತ್ತು ಔಷಧದಲ್ಲಿ 10% ಮತ್ತು ರೋಗ ತಪಾಸಣೆ, ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ.

ಶಿಬಿರದಲ್ಲಿ ಕಿವಿ, ಮೂಗು, ಗಂಟಲುಗಳ ತಪಾಸಣೆ, ಶ್ರವಣ ಪರೀಕ್ಷೆ, ಮಕ್ಕಳು ಮತ್ತು ವಯಸ್ಕರಲ್ಲಿ ಮೂಗಿನ ದ್ರವದ ತಪಾಸಣೆ, ಅಲರ್ಜಿಗೆ ಚಿಕಿತ್ಸೆ, ಮೈಗ್ರೇನ್ ತಲೆನೋವಿಗೆ ಚಿಕಿತ್ಸೆ, ವರ್ಟಿಗೋ ಪರೀಕ್ಷೆ ಮತ್ತು ಚಿಕಿತ್ಸೆ, ಧ್ವನಿ ಬದಲಾವಣೆಗಳ ಪರೀಕ್ಷೆ ಮತ್ತು ಚಿಕಿತ್ಸೆ, ಕಿವುಡುತನದ ಪರೀಕ್ಷೆ ಮತ್ತು ಚಿಕಿತ್ಸೆ, ಕಿವಿ-ಮೂಗು-ಗಂಟಲುಗಳ ಕ್ಯಾನ್ಸರ್ ತಪಾಸಣೆ, ಗೊರಕೆಗೆ ಚಿಕಿತ್ಸೆ ಮೊದಲಾದ ತಪಾಸಣೆ ಮತ್ತು ಚಿಕಿತ್ಸೆಗಳು ಉಚಿವಾಗಿ ದೊರೆಯಲಿದೆ. ಹೆಸರು ನೋಂದಾಯಿಸಲು7760397878 ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya
error: Content is protected !!