32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.

ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.

ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದ ಅವರು, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕೈಗೊಳ್ಳಲಾಗುತ್ತಿರುವ ವಿವಿಧ ವೃತ್ತಿ ತರಬೇತಿಗಳ ಪ್ರಗತಿ, ಗುರಿ ಸಾಧನೆ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿಗೂ ಅವರು ಭೇಟಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಹಾಗೂ ಜಿಲ್ಲಾ ವ್ಯವಸ್ಥಾಪಕರಾದ ಶಕುಂತಲಾ ಹಾಗೂ ಬೆಳ್ತಂಗಡಿ ತಾಲೂಕಿನ ಕಾರ್ಯಕ್ರಮ ವ್ಯವಸ್ಥಾಪಕ ಜಯಾನಂದ ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕಿನ ಉಜಿರೆಯ ಸಂಜೀವಿನಿ ಸಂಘದವರು ನಡೆಸುತ್ತಿರುವ ‘ಅಕ್ಕ ಹೋಟೆಲ್’ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಾತ್ಯಾಯಿನಿ ದೇವಿ ಅವರು, ಮಾರುಕಟ್ಟೆ ವ್ಯವಸ್ಥೆಯ ಅಭಿವೃದ್ಧಿ, ನಿರ್ವಹಣೆ ಹಾಗೂ ವಿಸ್ತರಣೆಯ ಕುರಿತು ಸೂಕ್ತ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya
error: Content is protected !!