September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಬೆಳ್ತಂಗಡಿ: ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಗಳು ರಾಜ್ಯ ಉಚ್ಚ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿರುವುದಾಗಿ ತಿಳಿದು ಬಂದಿದೆ.

ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶಕ್ಕೆ ತಾತ್ಕಲಿಕ ತಡೆಯಾಜ್ಞೆ ನೀಡಿದ್ದು ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು 21ದಿನದೊಳಗೆ ಪ್ರಕರಣದ‌ ಮರು ವಿಚಾರಣೆ ನಡೆಸಿ ಆದೇಶ ನೀಡುವಂತೆ ನ್ಯಾಯಾಲಯ ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.

Related posts

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya
error: Content is protected !!