28.1 C
ಪುತ್ತೂರು, ಬೆಳ್ತಂಗಡಿ
September 10, 2026
ಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಲೈಫ್‌ಸ್ಟೈಲ್‌ವರದಿಸರ್ಕಾರಿ ಇಲಾಖಾ ಸುದ್ದಿ

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ವಿಕಸಿತ ಭಾರತ 2047ಕ್ಕೆ ಪೂರಕವಾಗಿರುವ ದೀರ್ಘಕಾಲೀನ ದೃಷ್ಟಿಕೋನದೊಂದಿಗೆ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಇದು ಐತಿಹಾಸಿಕ ಬಜೆಟ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರು ಶ್ಲಾಘಿಸಿದ್ದಾರೆ.

ಕೃಷಿಗೆ ಹೆಚ್ಚಿನ ಹಣಕಾಸನ್ನು ಮೀಸಲಿಡಲಾಗಿದೆ. ಮೂಲ ಸೌಕರ್ಯ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಬಡವರು, ರೈತರ ಮತ್ತು ಸಮಗ್ರ ಅಭಿವೃದ್ಧಿಯ ಪರವಾದ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು, ಉದ್ಯೋಗ ಸೃಷ್ಟಿ, ಮತ್ತು ದೇಶದ ಸರ್ವತೋಮುಖ ಪ್ರಗತಿಗೆ ಬಜೆಟ್ ಸಹಕಾರಿಯಾಗಿದೆ. ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ರಾಜ್ಯಗಳಿಗೆ ಈ ಬಜೆಟ್ ಪೂರಕವಾಗಿದೆ.

ರೈತರು ಮತ್ತು ಬಡವರ ಪರವಾಗಿದ್ದು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಹಣಕಾಸು ಮೀಸಲಿಟ್ಟಿರುವುದು ಸ್ವಾಗತಾರ್ಹ. ಅಭಿವೃದ್ಧಿ ಆಧಾರಿತವಾಗಿದ್ದು ಮೂಲಸೌಕರ್ಯ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿರುವುದರಿಂದ ಇದು ಸಮತೋಲಿತ ಬಜೆಟ್ ಆಗಿದೆ. ರಕ್ಷಣಾಕ್ಷೇತ್ರಕ್ಕೆ ಹಿಂದೆಂದಿಗಿಂತ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಬ್‌ ಕಾ ಸಾಥ್ ಸಬ್ ಕಾ ವಿಕಾಸ್ ಇಲ್ಲಿ ಪ್ರತಿಫಲಿತವಾಗಿದೆ ಎಂದಿದ್ದಾರೆ.

Related posts

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya

ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಕಳೆಂಜ ಬಿ ಕಾರ್ಯಕ್ಷೇತ್ರದ ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!