26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

ಬೆಳ್ತಂಗಡಿ: ದ.ಕ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂಡಿಗೆರೆ ಅರಣ್ಯ ವಲಯದ ಜೇನುಕಲ್ಲು- ಆಲೇಖಾನ್ ಮಧ್ಯೆ ಬರುವ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಸ್ತೆ ಬದಿಯಿಂದ ಆರಂಭವಾದ ಬೆಂಕಿ ಕಾಡಿನತ್ತ ವ್ಯಾಪಿಸಿದೆ.

ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ.ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರೀ ಹಾನಿಯಾಗುವ ಆತಂಕ ವ್ಯಕ್ತವಾಗಿದೆ. ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕ ಮೂಡಿದೆ.ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ.

ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಲಾಗುತ್ತಿದ್ದು, ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ತರಲು ಪ್ರಯತ್ನಗಳು ಮುಂದುವರಿದಿವೆ ಎಂದು ತಿಳಿದುಬಂದಿದೆ.ಜ.18ರಂದು ಕೂಡ ಚಾರ್ಮಾಡಿ ಘಾಟಿಯ ಮಲಯ ಮಾರುತ ಪ್ರದೇಶದ ಸಮೀಪ ಬೆಂಕಿ ಕಾಣಿಸಿಕೊಂಡು ಅದು ಅರಣ್ಯ ಪ್ರದೇಶದವರೆಗೂ ಹಬ್ಬಿತ್ತು.

Related posts

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya
error: Content is protected !!