37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ನಡ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನಡ-ಕನ್ಯಾಡಿ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.01ರಂದು ಶ್ರೀ ಗುರುನಾರಾಯಣ ಸೇವಾ ಸಂಘ ನಡ ಇಲ್ಲಿ ನಡೆಯಿತು. ಸಂಘದ ಅಧ್ಯಕ್ಷ ದಿವಾಕರ್ ಸಾಲಿಯನ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಶ್ರೀ ನಿತ್ಯಾನಂದ ನಾವರ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ವೇದಿಕೆಯಲ್ಲಿ ಗುರುನಾರಾಯಣ ಸೇವಾ ಸಂಘ ನಡ -ಕನ್ಯಾಡಿ ಇದರ ಉಪಾಧ್ಯಕ್ಷೆ ವಸಂತಿ ವಸಂತ ಪೂಜಾರಿ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಜಗದೀಶ್ ನಡ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಚಿತ್ರಾವತಿ ಭಂಡಾರಿ ಕೋಡಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಗ್ರಾಮ ಸಮಿತಿ ಅಧ್ಯಕ್ಷ ರಮೇಶ್ ಕೋಟ್ಯಾನ್ ಕುತ್ರೋಟ್ಟು ಹಾಗೂ ಕಾರ್ಯದರ್ಶಿಯಾದ ಜಯಾನಂದ ಕೂಡೇಲು, ಉಪಸ್ಥಿತರಿದ್ದರು. ಸಮಾರಂಭದಲ್ಲಿ ಉಮೇಶ್ ಪೂಜಾರಿ ಹೊಕ್ಕಿಲ, ಕೃಷ್ಣಪ್ಪ ಪೂಜಾರಿ, ಕಮಲ, ಧನುಷ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಶ್ರೀ ಗುರು ನಾರಾಯಣ ಸೇವಾ ಸಂಘ ನಡ-ಕನ್ಯಾಡಿ ಇದರ ಪ್ರಧಾನ ಕಾರ್ಯದರ್ಶಿಯಾದ ಮೀನಾಕ್ಷಿ ಕೆ ಭಂಡಾರಿ ಕೋಡಿಯವರು ಕಾರ್ಯಕ್ರಮವನ್ನು ಸಂಯೋಜಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya
error: Content is protected !!