32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸ್ಪಂದನ; ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಸಹಕಾರದೊಂದಿಗೆ ಜ.31ರಂದು ಸಂಭ್ರಮ-2 ಯುವ ವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ ಪಣಕಜೆಯ ನವಸುಮ ನಿವಾಸದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವಿಶೇಷವಾಗಿ ಸ್ಪಂದನ ಹೃದಯ ಸ್ತಂಭನ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಉಜಿರೆ ಬೆನಕ ಹೆಲ್ತ್ ಸೆಂಟರ್ ನ ತುರ್ತು ಚಿಕಿತ್ಸಾ ತಜ್ಞರಾದ ಡಾ. ಆದಿತ್ಯ ರಾವ್ ಸಿಆರ್ ಪಿ ಪ್ರಾತ್ಯಕ್ಷಿಕೆ ಮುಲಕ ಹೃದಯ ಸ್ತಂಭನ ಹಾಗೂ ಹೃದಯಘಾತವಾದಾಗ ನಾವು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಘಟಕದ ಮಾಜಿ ನಿರ್ದೇಶಕರಾದ ದಿವಂಗತ ಶಶಿಧರ ಆದೇಲು ಇವರ ಮಕ್ಕಳಿಗೆ ಘಟಕದ ವತಿಯಿಂದ ವಿದ್ಯಾನಿಧಿ ವಿತರಿಸಲಾಯಿತು.

ಕೇಂದ್ರ ಸಮಿತಿಯ ಆರೋಗ್ಯ ನಿರ್ದೇಶಕರು ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮುಡುಕೋಡಿ ಕಾರ್ಯಕ್ರಮದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಮನೆಯ ಯಜಮಾನರಾದ ವಸಂತ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪಣಕಜೆ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ. ಆದಿತ್ಯ ರಾವ್ ಇವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಘಟಕದ ಅಧ್ಯಕ್ಷ ಗುರುರಾಜ ಗುರಿಪಳ್ಳ ಅಧ್ಯಕ್ಷತೆ ವಹಿಸಿ, ಕಾರ್ಯದರ್ಶಿ ಮಧುರ ರಾಘವ ವಂದಿಸಿದರು. ಘಟಕದ ಮಾಜಿ ಅಧ್ಯಕ್ಷ ಸದಾಶಿವ ಪೂಜಾರಿ ಊರ, ಕೋಶಾಧಿಕಾರಿ ನಾಗೇಶ್ ಅದೇಲು, ಯುವ ವಾಹಿನಿಯ ಪದಾಧಿಕಾರಿಗಳು, ನಿರ್ದೇಶಕರು, ಸಂಘಟನಾ ಕಾರ್ಯದರ್ಶಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya
error: Content is protected !!