March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

ಬೆಳ್ತಂಗಡಿ: ಗೇರುಕಟ್ಟೆ ಸಮೀಪದ ಸಂಬೋಳ್ಯದ ಬಾಲಕ ಸುಮಂತ್ (15ವ) ನಿಗೂಢ ರೀತಿಯಲ್ಲಿ ಮೃತಪಟ್ಟಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸ್ ಇಲಾಖೆ ಪ್ರಕರಣವನ್ನು ಲಘುವಾಗಿ ಪರಿಗಣಿಸಿಲ್ಲ. ಈಗಾಗಲೇ 4 ವಿಶೇಷ ತಂಡಗಳ ಮೂಲಕ ತನಿಖೆ ನಡೆಯುತ್ತಿದೆ. ಪ್ರಕರಣವನ್ನು ಶೀಘ್ರ ಭೇದಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ವಿಧಾನಸಭೆ ಅಧಿವೇಶನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಧನುಪೂಜೆಗೆಂದು ತೆರಳಿದ್ದ ಬಾಲಕ ಮನೆ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ತನಿಖೆಯ ಪ್ರಗತಿ ಕುರಿತು ತಿಳಿಸುವ ಜತೆಗೆ ಸತ್ಯಾಸತ್ಯತೆ ಪತ್ತೆ ಮಾಡಬೇಕು. ಆತ ಯುವ ವಿಜ್ಞಾನಿಯಾಗಿ ಹೆಸರು ಮಾಡಿದ್ದು, ಅಹಮದಾಬಾದ್‌ನಲ್ಲಿ ನಡೆಯ ಬೇಕಿದ್ದ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೂ ಆಯ್ಕೆಯಾಗಿದ್ದ. ಜಿಲ್ಲೆಯ ಜನತೆ ಪ್ರಕರಣದ ಕುರಿತು ಆತಂಕ ವ್ಯಕ್ತಪಡಿಸಿದ್ದು ಪ್ರಕರಣವನ್ನು ಭೇದಿಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಶಾಸಕರು ಗೃಹ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಮೃತ ಬಾಲಕನ ತಲೆಯಲ್ಲಿ ಗಾಯ ಕಂಡು ಬಂದಿರುವುದರಿಂದ ಬಿಎನ್‌ಎಸ್ ಎಸ್ 103 (1) ನಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಕೊಲೆಯಾಗಿದ್ದರೆ ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಶಾಸಕರನ್ನೂ ವಿಶ್ವಾಸಕ್ಕೆ ಪಡೆದು ಪ್ರಕರಣವನ್ನು ಭೇದಿಸಲು ಇಲಾಖೆಗೆ ಸೂಚನೆ ನೀಡುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ.

Related posts

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!