September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿ ಸಹಭಾಗಿತ್ವದಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಎರಡು ದಿನಗಳ’ ಪ್ರತಿಭಾ ಪ್ರದರ್ಶನ – 2025-26 ‘ ಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ರಾಷ್ಟ್ರ ಪ್ರೇಮವನ್ನು ಪ್ರತಿಬಿಂಬಿಸುವ ವಿನೂತನವಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ತಂಡ ತಂಡವಾಗಿ ಪ್ರದರ್ಶನ ಮಾಡಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರೊ ವಿಶ್ವನಾಥ್ ಪಿ. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ನಂದ ಕುಮಾರಿ, ಪಿಜಿ ಕೇಂದ್ರದ ಡೀನ್ ಸೌಮ್ಯ, ಪರೀಕ್ಷಾಂಗ ಕುಲಸಚಿವ ಗಣೇಶ್ ನಾಯ್ಕ್ ಹಾಗು ಐಕ್ಯುಎಸಿ ಸಂಯೋಜಕ ಗಜಾನನ ಭಟ್, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಅಧ್ಯಕ್ಷ ಡಾ. ನಾಗಣ್ಣ ಉಪಸ್ಥಿತರಿದ್ದರು.

ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿವರ್ಗದವರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ತೀರ್ಪುಗಾರರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸೌಖ್ಯ ಎಸ್.ಜೈನ್ ನಿರೂಪಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಅಧ್ಯಕ್ಷ ಡಾ. ನಾಗಣ್ಣ ವಂದಿಸಿದರು.

Related posts

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya
error: Content is protected !!