ಕನ್ಯಾಡಿ : ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ ತಂಡವು ಫೆ. 01 ರಂದು ಕನ್ಯಾಡಿ ಸೇವಾನಿಕೇತನದ ನೂತನ ಕಾರ್ಯಾಲಯ ಮತ್ತು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೇಟಿ ನೀಡಿದರು. ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು.

ನಿರಂತರವಾಗಿ ಸೇವಾಭಾರತಿ ಸಂಸ್ಥೆಗೆ ಸಿಎಸ್.ಆರ್ ಅನುದಾನವನ್ನು ಒದಗಿಸುತ್ತಿರುವುದಕ್ಕಾಗಿ ಸಂಸ್ಥೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಜಯರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ. ಉಪಸ್ಥಿತರಿದ್ದರು.











