September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

ಬಂದಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬೈಪಾಡಿಯ 10 ನ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಳ್ಳ ಲಾಗಿದ್ದು ಸಮಾರೋಪ ಕಾರ್ಯಕ್ರಮವನ್ನು ಸರಕಾರಿ ಪ್ರೌಢ ಶಾಲೆ ಬೈಪಾಡಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹಾಬಲ ಗೌಡ ರವರು ನಮ್ಮ ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿಶೇಷ ತರಗತಿಯ ಅವಕಾಶವನ್ನು ಕಲ್ಪಿಸಿದಕ್ಕಾಗಿ ಧನ್ಯವಾದ ಹೇಳಿ ಮಕ್ಕಳು ಯಾವುದೇ ವಿಷಯವನ್ನು ಕಷ್ಟವೆಂದು ತಿಳಿದುಕೊಳ್ಳದೆ ಪ್ರಯತ್ನಪಟ್ಟು ಓದಿ ಉತ್ತಮ ಅಂಕ ಗಳಿಸುವಂತೆ ತಿಳಿಸಿದರು. ಮೇಲ್ವಿಚಾರಕ ಪೂರ್ಣಿಮಾ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಗ್ರಾಮೀಣ ಪ್ರದೇಶದ ಮಕ್ಕಳಿಗೆ ವಿಶೇಷ ತರಗತಿಯ ಅವಕಾಶಗಳು ಇಲ್ಲದೆ ಇದ್ದು ಜ್ಞಾನ ವಿಕಾಸ ಕೇಂದ್ರದ ಮೂಲಕ ಸದಸ್ಯರ ಮಕ್ಕಳಿಗೇ ಟ್ಯೂಷನ್ ಕ್ಲಾಸ್ ಗೆ ಅವಕಾಶವನ್ನು ಒದಗಿಸಿದ್ದು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವoತೆ ತಿಳಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ರವರು 100 ಶೇಕಡಾ ಫಲಿತಾಂಶ ಬರುವುದು ಮುಖ್ಯವಲ್ಲ ಸಾಧನೆ ಮುಖ್ಯ ನಮ್ಮ ಶಾಲೆಯ ಮಕ್ಕಳಿಗೆ ವಿಶೇಷ ತರಗತಿಗೆ ಅವಕಾಶ ಒದಗಿಸಿರುವುದರಿಂದ ಪ್ರಥಮ ಪೂರಕ ಪರೀಕ್ಷೆಯಿಂದ ದ್ವಿತೀಯ ಪೂರಕ ಪರೀಕ್ಷೆಯಲ್ಲಿ ಮಕ್ಕಳು ಹೆಚ್ಚು ಅಂಕ ಪಡೆದಿರುವುದು ಸಾಕ್ಷಿಯಾಗಿದೆ ಅವಕಾಶ ಒದಗಿಸಿದಕ್ಕಾಗಿ ಧನ್ಯವಾದ ಹೇಳಿದರು.

ವೇದಿಕೆಯಲ್ಲಿ ಒಕ್ಕೂಟ ಅಧ್ಯಕ್ಷ ಶಶಿಧರ ಗೌಡ, ಉಪಾಧ್ಯಕ್ಷರಾದ ದಿನೇಶ್, ಗೀತಾ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಕಾರ್ಯಕ್ರಮ ನಿರೂಪಿಸಿದರು. ಪ್ರಮೀಳಾ ಸೇವಾಪ್ರತಿನಿಧಿ ಸ್ವಾಗತಿಸಿ, ವಿಶೇಷ ತರಗತಿ ಶಿಕ್ಷಕ ಮೇದ ಧನ್ಯವಾದ ನೀಡಿದರು. ಮಕ್ಕಳಾದ ದೃತಿ ಮತ್ತು ನಿತ್ಯ ರವರು ಅನಿಸಿಕೆ ವ್ಯಕ್ತಪಡಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya
error: Content is protected !!