September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

ಬೆಳ್ತಂಗಡಿ; ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಬಂಟ್ವಾಳ ನ್ಯಾಯಾಲಯ ಆದೇಶ ಹೊರಡಿಸಿದೆ.

ದ್ವೇಷ ಭಾಷಣ ಮಾಡಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ದಾಖಲಿಸಿದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ನ್ಯಾಯಾಲಯಕ್ಕೆ ಹಾಜರಾಗದೆ ಇದ್ದ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯ ಮಹೇಶ್ ಶೆಟ್ಟಿ ಅವರ ವಿರುದ್ಧ ವಾರೆಂಟ್ ಜಾರಿ ಮಾಡಿತ್ತು. ಇದೀಗ ಬಂಟ್ವಾಳ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ಪರವಾಗಿ ನ್ಯಾಯವಾದ ಸಿರಾಜುದ್ದೀನ್ ಜೋಗಿಬೆಟ್ಟು ವಾದ ಮಂಡಿಸಿದ್ದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya
error: Content is protected !!