September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ನವದೆಹಲಿ, ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ , NET ಗ್ರೂಪ್ ಅಫ್ ಇನ್ಸ್ಟಿಟ್ಯೂಷನ್ಸ್, ತಾಲೂಕು ಸಾರ್ವಜನಿಕ ಆಸ್ಪತ್ರೆ, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇವುಗಳ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನಾಚರಣೆಯ ಪ್ರಯುಕ್ತ ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನವು ಗುರುವಾಯನಕೆರೆ ಪೇಟೆಯಲ್ಲಿ ಫೆ. 4 ರಂದು ನಡೆಯಿತು. ಮಾನಿನಿ ರಾಜ್ಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಜೋನ್ ಕ್ಯಾನ್ಸರ್ ರೋಗದ ಬಗ್ಗೆ ತಯಾರಿಸಿದ ಕರಪತ್ರವನ್ನು ಅನಾವರಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂದನೀಯ ಫಾ. ಬಿನೋಯಿ ಎ. ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಮೂಲಕ ನಡೆಸಲ್ಪಡುವ ಕ್ಯಾನ್ಸರ್ ರೋಗದ ವಿರುದ್ಧದ ಅಭಿಯಾನದ ಕುರಿತು ಸಮಗ್ರವಾಗಿ ವಿವರಿಸಿದರು. ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂಜಾತ್ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಎ. ಕಾರ್ಯಕ್ರಮಕ್ಕೆ ಶುಭಹಾರೈಸಿದರು. NET ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ಪ್ರೊ. ಮನು ಕೆ. ಜೋಸೆಫ್ ಹಾಗೂ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್ ಉಪಸ್ಥಿತರಿದ್ದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಸಂಯೋಜಕಿ ಕು. ಶ್ರೇಯ ಧನ್ಯವಾದವಿತ್ತರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜಾರವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಗುರುವಾಯನಕೆರೆ ಪೇಟೆಯಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮೈಕ್ ಉದ್ಘೋಷಣೆ ಮಾಡಿ, ಸಾರ್ವಜನಿಕರಿಗೆ ಕ್ಯಾನ್ಸರ್ ರೋಗದ ಬಗ್ಗೆ ಕರಪತ್ರ ಹಂಚಲಾಯಿತು. ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗ ಪೀಡಿತ ವ್ಯಕ್ತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ಅಂಗಡಿ ಮುಂಗಟ್ಟುಗಳ ವರ್ತಕರಿಂದ ಧನ ಸಹಾಯ ಸಂಗ್ರಹಣೆ ಮಾಡಲಾಯಿತು. ಒಕ್ಕೂಟದ ಅಧ್ಯಕ್ಷರುಗಳು, ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ NET ಗ್ರೂಪ್ ಅಫ್ ಇನ್ಸ್ಟಿಟ್ಯೂಷನ್ಸ್ ಇದರ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!