32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

ಉಜಿರೆ: ಹರಿಯಾಣ ರಾಜ್ಯದ ರಾಣಿ ಪತ್ನಲ್ಲಿ ನಡೆದ ಎಸ್‌ಜಿಎಫ್‌ಐ (SGFI) ವಯೋಮಿತಿ – 19 ಬಾಲಕರ ವಿಭಾಗದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕರ್ನಾಟಕ ತಂಡವು ಆಯ್ಕೆಯಾಗಿ, ಯಶಸ್ವಿ ಪ್ರದರ್ಶನವನ್ನು ನೀಡುವ ಮೂಲಕ ಪಂದ್ಯಾಟದಲ್ಲಿ ಪಾಲ್ಗೊಂಡಿತ್ತು.

ಈ ಬಾರಿ ಕರ್ನಾಟಕ ತಂಡವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರತಿನಿಧಿಸಿ, ತಂಡಕ್ಕೆ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿಭಾವಂತ ಕ್ರೀಡಾ ಪಟುಗಳನ್ನು ಒಳಗೂಡಿಸಿಕೊಂಡಿತ್ತು. ಒಟ್ಟು 12 ವಿದ್ಯಾರ್ಥಿಗಳನ್ನು ಒಳಗೊಂಡಿದ್ದ ರಾಜ್ಯ ತಂಡವು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ 10ದಿನಗಳ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿತ್ತು.

ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡವು ಇತ್ತೀಚೆಗೆ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದಲ್ಲಿ ಚಾಂಪಿಯನ್ ಗಳಾಗಿ ಹೊರಹೊಮ್ಮಿ, ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಅರ್ಹತೆಯನ್ನು ಪಡೆದುಕೊಂಡಿತ್ತು. ಇದೇ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ತಂಡಕ್ಕೆ ಮೆಚ್ಚುಗೆಯನ್ನು ‌ವ್ಯಕ್ತಪಡಿಸಿ, ಶುಭ ಹಾರೈಸಿದ್ದರು.

ರಾಷ್ಟ್ರ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ತಂಡಕ್ಕೆ ಎಸ್.ಡಿ.ಎಂ ಸಂಸ್ಥೆಯ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್, ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ. ಪೂಂಜ, ಕಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್ ಶುಭ ಹಾರೈಸಿದ್ದಾರೆ.

ವಿವಿಧ ಜಿಲ್ಲೆಗಳ ಕ್ರೀಡಾ ಪಟುಗಳು ರಾಜ್ಯ ತಂಡದಲ್ಲಿ ಭಾಗಿ :

ರಾಜ್ಯದಿಂದ ತೆರಳಿದ ಕಬಡ್ಡಿ ತಂಡದಲ್ಲಿ ಧಾರವಾಡ, ಚಿಕ್ಕೋಡಿ, ವಿಜಯಪುರ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿಭಾನ್ವಿತ ಕ್ರೀಡಾ ಪಟುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ತಂಡದ ನಾಯಕತ್ವವನ್ನು ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸತ್ಯ ನಾಯಕ್ ನಿರ್ವಹಿಸಿದ್ದು, ವಿದ್ಯಾರ್ಥಿಗಳಾದ ಆಶಿಶ್, ಆಶಿಕ್, ಕಾರ್ತಿಕ್, ಆನಂದ್, ವಿಪುಲ್ ಶೆಟ್ಟಿ, ಸಂದೀಪ್, ವಿವೇಕಾನಂದ, ಅನಿಲ್, ಸಹೀಮ್, ಪ್ರಶಾಂತ್, ಮಾತು ಮತ್ತು ಆದರ್ಶ್ ತಂಡದಲ್ಲಿ ಅರ್ಹತೆಯನ್ನು ಪಡೆದುಕೊಂಡಿದ್ದರು. ತಂಡಕ್ಕೆ ಹಿರಿಯ ಕಬಡ್ಡಿ ತರಬೇತುದಾರ ಕೃಷ್ಣಾನಂದರಾವ್ ತರಬೇತಿಯನ್ನು
ನೀಡಿರುತ್ತಾರೆ. ತಂಡದ ವ್ಯವಸ್ಥಾಪಕರಾಗಿ ವಿಜಯಪುರದ ರಮೇಶ್ ಆಯ್ಕೆಗೊಂಡಿದ್ದರು.

Related posts

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!