23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಮಂಗಳೂರಿನ ಅತ್ತಾವರದ ಕೆಎಂಸಿ ರಕ್ತ ಕೇಂದ್ರ, ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಬೆಳ್ತಂಗಡಿ ಸೇರಿದಂತೆ ಕಾಲೇಜಿನ ರೆಡ್‌ಕ್ರಾಸ್ ಘಟಕ ಸಹಭಾಗಿತ್ವದಲ್ಲಿ ಕಾಲೇಜಿನ ಬೋಟನಿ ಲ್ಯಾಬ್ ನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ರಕ್ತದಾನದ ಉದ್ಘಾಟನಾ ಕಾರ್ಯಕ್ರಮವನ್ನು ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಿಕರಾದ ಮೋಹನ್ ಕುಮಾರ್ ಚಾಲನೆ ನೀಡಿದರು. ಬಳಿಕ ಮಾತನಾಡಿ, ರಕ್ತದಾನ ಮಾಡುವುದು ಒಂದು ಮಹತ್ತರವಾದ ಕಾರ್ಯ. ಈ ಶಿಬಿರವು ಸೇವೆಯ ಜೊತೆಗೆ ಆರೋಗ್ಯದ ಜಾಗೃತಿಯನ್ನು ಮೂಡಿಸುತ್ತದೆ. ದಾನದಿಂದ ಸಂಗ್ರಹವಾದ ರಕ್ತ ಅನೇಕರ ಬದುಕನ್ನು ಉಳಿಸುತ್ತದೆ. ಇವೆಲ್ಲದಕ್ಕೂ ಮಿಗಿಲಾಗಿ ರಕ್ತದಾನದಿಂದ ಯಾವುದೇ ಆರೋಗ್ಯದ ನಷ್ಟ ಇಲ್ಲ. ಇಂತಹ ಶಿಬಿರಗಳಿಂದ ಸಂಗ್ರಹವಾದ ರಕ್ತ ಎಷ್ಟೋ ತುರ್ತು ಸನ್ನಿವೇಶದ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಅಧ್ಯಾಪಕ ರೋ. ಸೋಮಶೇಖರ ಬಿ ಮಾತನಾಡಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಪಠ್ಯದ ಜೊತೆಗೆ ರಕ್ತದಾನದಂತಹ ಸೇನಾಕಾರ್ಯಾಚರಣೆಯನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ರಕ್ತದಾನ ನೂರಾರು ಜನರ ಆರೋಗ್ಯವನ್ನು ಬದುಕಿಸಲು ಉಪಯೋಗವಾಗಲಿದೆ. ಇಂತಹ ಸಾಮಾಜಮುಖಿ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಬೇಕು. ರಕ್ತದಾನ ಶ್ರೇಷ್ಠ ದಾನ ಮತ್ತು ಅನೇಕರ ಬದುಕಿಗೆ ಜೀವ ತುಂಬುವ ದಾನ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಶ್ವನಾಥ್ ಪಿ ಮಾತನಾಡಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವುದರ ಜೊತೆಗೆ ಸಮಾಜ ಮುಖಿ ಚಿಂತನೆಗಳನ್ನು ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಇದರ ಭಾಗವಾಗಿ ಈ ಬೃಹತ್ ರಕ್ತದಾನ ಶಿಬಿರವು ಒಂದು. ಇದಕ್ಕೆ ಹಲವು ಸಂಘ ಸಂಸ್ಥೆಗಳು ಸಹಕಾರ ನೀಡಿದೆ. ಈ ರಕ್ತದಾನ ನೂರಾರು ಜನರ ಆರೋಗ್ಯವನ್ನು ಬದುಕಿಸಲು ಉಪಯೋಗವಾಗಲಿದೆ ಎಂದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್ಕಾರ್ಯಕ್ರಮವನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪ್ರತೀ ವರ್ಷ ವರ್ಷಕ್ಕೆ ಎರಡು ಬಾರಿ ಸಂಘ ಸಂಸ್ಥೆಗಳ ಸಹಕಾರದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ವಿಶೇಷವಾಗಿ ಶಿಬಿರದಲ್ಲಿ 230 ರಿಂದ 250 ಯುನಿಟ್ ರಕ್ತದ ವರೆಗೆ ವಿದ್ಯಾರ್ಥಿಗಳಿಂದ ಸಂಗ್ರಹಿಸಿ ರಕ್ತ ಸಂಗ್ರಹಣ ಕೇಂದ್ರಗಳಿಗೆ ಕಳಿಸಿಕೊಡುವಂತಹ ಮಹತ್ತರ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.

ಈ ವೇಳೆ ಕೆಎಂಸಿ ಆಸ್ಪತ್ರೆಯ ಡಾ. ವನಿಕ ಮಾತನಾಡಿ, ರಕ್ತದಾನದಿಂದ ಯಾವುದೇ ಆರೋಗ್ಯದ ನಷ್ಟ ಇಲ್ಲ. ಇಂತಹ ಶಿಬಿರಗಳಿಂದ ಸಂಗ್ರಹವಾದ ರಕ್ತ ಎಷ್ಟೋ ತುರ್ತು ಸನ್ನಿವೇಶದ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದರು. ಒಂದು ಯುನಿಟ್ ರಕ್ತದಿಂದ ಅಗತ್ಯತೆ ಇದ್ದ ಮೂರು ಜನರನ್ನು ಬದುಕಿಸುವ ಶಕ್ತಿ ಇರುತ್ತದೆ ಎಂದು ಶಿಬಿರವನ್ನು ಆಯೋಜಿಸಿದ ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅಭಿನಂದನೆಯನ್ನು ತಿಳಿಸಿದರು. ಬಳಿಕೆ ಕಾಲೇಜಿನ ಪ್ರಾಂಶುಪಾಲ ಪ್ರಾಂಶುಪಾಲರಿಕೆ ಕೆ.ಎಂ.ಸಿ ಆಸ್ಪತ್ರೆಯ ಅಭಿನಂದಾನ ಸ್ಮರಣಿಕೆಯನ್ನು ಹಸ್ತಾಂತರಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಉಜಿರೆಯ ಸುರಕ್ಷಾ ಮಡಿಕಲ್ ಮಾಲಕರಾದ ರೋ. ಶ್ರೀಧರ್ ಕೆ ವಿ, ಎನ್. ಎಸ್.ಎಸ್ ಯೋಜನಾಧಿಕಾರಿ ಮಾಲಿನಿ ಅಂಚನ್, ರೆಡ್ ಕ್ರಾಸ್ ವಿಭಾಗದ ಉಪನ್ಯಾಸಕಿ ಮಂಜುಶ್ರೀ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎನ್ಎಸ್ಎಸ್ ವಿಭಾಗದ ವಿದ್ಯಾರ್ಥಿಗಳು ನಿರೂಪಿಸಿ, ಉಪನ್ಯಾಸಕಿ ಮಂಜು ಶ್ರೀ ವಂದಿಸಿದರು.

180 ಯುನಿಟ್ ರಕ್ತ ಸಂಗ್ರಹ :

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ನೂರಾರು ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿದರು. ಶಿಬಿರದಲ್ಲಿ ದಾಖಲೆಯ 180 ಯುನಿಟ್ ರಕ್ತ ಸಂಗ್ರಹ ಮಾಡಿ ಮಂಗಳೂರಿನ ಅತ್ತಾವರದ ಕೆಎಂಸಿ ಆಸ್ಪತ್ರೆಯ ರಕ್ತ ಸಂಗ್ರಹಣ ಘಟಕಕ್ಕೆ ಕಳುಹಿಸಿಕೊಡಲಾಯಿತು.

Related posts

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಗ್ರಾಮೀಣ ಭಾಗಗಳಲ್ಲಿ ಬಿರುಸಿನ ಪ್ರಚಾರ

Suddi Udaya
error: Content is protected !!