25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.

ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದ ಅವರು, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕೈಗೊಳ್ಳಲಾಗುತ್ತಿರುವ ವಿವಿಧ ವೃತ್ತಿ ತರಬೇತಿಗಳ ಪ್ರಗತಿ, ಗುರಿ ಸಾಧನೆ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು.

ಇದೇ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿಗೂ ಅವರು ಭೇಟಿ ನೀಡಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಹರಿಪ್ರಸಾದ್ ಹಾಗೂ ಜಿಲ್ಲಾ ವ್ಯವಸ್ಥಾಪಕಿ ಶಕುಂತಲಾ ಹಾಗೂ ಬೆಳ್ತಂಗಡಿ ತಾಲೂಕಿನ ಕಾರ್ಯಕ್ರಮ ವ್ಯವಸ್ಥಾಪಕರಾದ ಜಯಾನಂದ ಉಪಸ್ಥಿತರಿದ್ದರು.

ಅನಂತರ ಬೆಳ್ತಂಗಡಿ ತಾಲೂಕಿನ ಉಜಿರೆಯ ಸಂಜೀವಿನಿ ಸಂಘದವರು ನಡೆಸುತ್ತಿರುವ ಅಕ್ಕ ಹೋಟೆಲ್’ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಾತ್ಯಾಯಿನಿ ದೇವಿ ಅವರು, ಮಾರುಕಟ್ಟೆ ವ್ಯವಸ್ಥೆಯ ಅಭಿವೃದ್ಧಿ, ನಿರ್ವಹಣೆ ಹಾಗೂ ವಿಸ್ತರಣೆಯ ಕುರಿತು ಸೂಕ್ತ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು.

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!