September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

ಪುದುವೆಟ್ಟು: ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನ ಮಿಯ್ಯಾರು ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುದುವೆಟ್ಟು ವಿಭಾಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಫೆ.7 ಹಾಗೂ 8 ರಂದು ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ ಜರುಗಲಿರುವುದು.

ಫೆ.7ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ, ಶ್ರೀ ಸತ್ಯನಾರಾಯಣ ಪೂಜೆ ಆರಂಭ, ಮಹಾಮಂಗಳಾರತಿ, ಮಧ್ಯಾಹ್ನ ಶ್ರೀ ವನದುರ್ಗಾ ದೇವಿಯ ಮಹಾಪೂಜೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಹಿಪ್-ಬಾಯ್ಸ್ ನೃತ್ಯ ತಂಡ ಉಜಿರೆ ಇವರಿಂದ ನೃತ್ಯ ಕಾರ್ಯಕ್ರಮ, ಅಪ್ಪೆ ಬ್ರಾಹ್ಮರಿ, ರಾತ್ರಿ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ಜರುಗುವುದು.
ಫೆ.೮ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಪುದುವೆಟ್ಟು ಗ್ರಾಮದ ಪ್ರತಿಭಾನ್ವಿತರಿಂದ ಸಾಂಸ್ಕೃತಿಕ ವೈವಿಧ್ಯ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಭಜನಾ ಕಮ್ಮಟೋತ್ಸವ ಜರುಗುವುದು.

ಧಾರ್ಮಿಕ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬೊಮ್ಮಣ್ಣ ಗೌಡ ಮಠ, ಧಾರ್ಮಿಕ ಪ್ರವಚನವನ್ನು ಲಕ್ಷ್ಮೀಶ ಭಟ್ ಗಬಲಡ್ಕ ನೆರವೇರಿಸಲಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ, ಶ್ರೀ ಸೌತಡ್ಕ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಹರೀಶ್ ಇಂಜಾಡಿ, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಸ್ವರ್ಣ ಗೌರಿ, ಅಧ್ಯಕ್ಷರು ಸೇವಾ ಭಾರತಿ ಬೆಳ್ತಂಗಡಿ, ನಾಗೇಶ್ ಕುಮಾರ್ ಗೌಡ, ಸ್ವಾಮಿ ಪ್ರಸಾದ್ ಕನ್‌ಸ್ಟçಕ್ಷನ್ಸ್, ಲಾಯಿಲ ಭಾಗವಹಿಸಲಿರುವರು.

Related posts

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!