23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ-73 ರ ಮುಂಡಾಜೆ ಗ್ರಾಮದ ಸೀಟ್ ರಕ್ಷಿತಾರಣ್ಯ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತಂದು ಸುರಿಯಲಾಗುತ್ತಿದೆ.

ರಸ್ತೆ ಬದಿಯ ಚರಂಡಿಯಲ್ಲಿ ರಾಶಿರಾಶಿ ಪ್ಲಾಸ್ಟಿಕ್ ತ್ಯಾಜ್ಯಗಳು ಕಂಡು ಬರುತ್ತಿವೆ. ಕೆಲವೊಂದು ಕಡೆಗಳಲ್ಲಿ ಗೋಣಿಯಲ್ಲಿ ಕಟ್ಟಿ ಹಾಕಿದ ತ್ಯಾಜ್ಯಗಳು ಕಂಡು ಬರುತ್ತಿವೆ. ಹೀಗೆಯೇ ಮುಂದುವರಿದರೆ ಮೀಸಲು ಅರಣ್ಯ ತ್ಯಾಜ್ಯ ಡಂಪಿಂಗ್ ಯಾರ್ಡ್ ಆಗಿ ಬದಲಾಗುವುದು ನಿಶ್ಚಿತ.

ರಸ್ತೆ ಬದಿಯ ಅಲ್ಲಲ್ಲಿ ತ್ಯಾಜ್ಯ ರಾಶಿಗಳು ಕಂಡು ಬರುತ್ತಿವೆ. ಮಕ್ಕಳ ಸ್ಯಾನಿಟರಿ ಪ್ಯಾಡ್, ಗೃಹ ಬಳಕೆಯ ತ್ಯಾಜ್ಯಗಳು, ನೀರಿನ ಬಾಟಲ್, ತಲೆದಿಂಬುಗಳು ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಈ ರಕ್ಷಿತಾರಣ್ಯ ಪ್ರದೇಶದಲ್ಲಿ ತಂದು ಸುರಿಯುತ್ತಿದ್ದಾರೆ. ಇದು ಮೀಸಲು ರಕ್ಷಿತಾರಣ್ಯ ಪ್ರದೇಶವಾಗಿದ್ದು, ಯಾವುದೇ ಇಲ್ಲಿ ತ್ಯಾಜ್ಯಗಳನ್ನು ತಂದು ಸುರಿಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ. ಇದನ್ನು ತೆರವುಗೊಳಿಸಿ ರಕ್ಷಿತಾರಣ್ಯ ಪ್ರದೇಶವನ್ನು ಸಂರಕ್ಷಿಸಬೇಕಾಗಿದೆ.

ಅರಣ್ಯದ ಮಧ್ಯೆ ರಸ್ತೆ ಹಾದು ಹೋಗುವುದರಿಂದ ಸಾಕಷ್ಟುನೆರಳು ಹಾಗೂ ತಂಪಾದ ವಾತವರಣವಿದ್ದು, ಹೀಗಾಗಿ ಪ್ರವಾಸಿಗರು ಇಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಆಹಾರ ಸೇವನೆಯನ್ನು ಕೂಡಾ ಮಾಡುತ್ತಾರೆ. ಹೀಗಾಗಿಯೇ ಈ ಪ್ರದೇಶದ ಅಲ್ಲಲ್ಲಿ ಆಹಾರ ಪೊಟ್ಟಣಗಳು ಕೂಡಾ ರಾಶಿ ಬಿದ್ದಿವೆ. ಅಲ್ಲದೆ ಕೆಲವು ಪ್ರವಾಸಿಗರು ವಾಹನಗಳನ್ನು ನಿಲ್ಲಿಸಿ ಮದ್ಯಪಾನ, ಧೂಮಪಾನ ಮಾಡುತ್ತಾ ರೆಂಬ ಆರೋಪವೂ ಇದೆ. ಧೂಮಪಾನದ ಕಿಡಿಯಿಂದ ಬೆಂಕಿ ಹತ್ತಿಕೊಂಡರೆ ಸಂಪೂರ್ಣ ಅರಣ್ಯ ಬೆಂಕಿಗೆ ಆಹುತಿಯಾಗಬಹುದು.

ಕೆಲವು ಪ್ರವಾಸಿಗರು ವಾಹನಗಳನ್ನು ನಿಲ್ಲಿಸಿ, ಕಾಡಿನೊಳಗೆ ತೆರಳಿ ವಿರಾಮ ಪಡೆಯುತ್ತಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಇದು ಹೀಗೆಯೇ ಮುಂದು ವರಿದರೆ ಅನೈತಿಕ ಚಟುವಟಿಕೆಗಳೂ ನಡೆ ಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಅಂಗಡಿಗಳ ಸಂಖ್ಯೆಯಲ್ಲಿ ಹೆಚ್ಚಳ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ -73 ರ ಮುಂಡಾಜೆ ಗ್ರಾಮದ ಸೀಟ್ ರಕ್ಷಿತಾರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಕೆಲವೊಂದು ಅಂಗಡಿಗಳು ಕೂಡಾ ಕಾರ್ಯಾಚರಿಸುತ್ತಿವೆ. ಇದು `ಪ್ಲಾಸ್ಟಿಕ್ ಕವರ್‌ನಲ್ಲಿ ಸಿದ್ದವಾಗಿರುವ ತಿಂಡಿ ತಿನಿಸುಗಳನ್ನೂ ಮಾರಾಟ ಮಾಡುತ್ತಿದ್ದು ಪ್ಲಾಸ್ಟಿಕ್ ತ್ಯಾಜ್ಯ ರಾಶಿ ಹೆಚ್ಚಳಕ್ಕೆ ಕಾರಣವಾಗಬಹುದು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya
error: Content is protected !!