
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಚೈತನ್ಯಶಕ್ತಿ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಚಿಂತನೆಗಳುಳ್ಳ, ಸಮಾಜಕ್ಕೆ ಮಾದರಿಯಾಗಿರುವ, ಮಾತೃ ಹೃದಯದಿಂದ

ಸಮಾಜವನ್ನು ನೋಡುವ ದೃಷ್ಟಿಕೋನ ಹೊಂದಿರುವ, ಅನೇಕ ಸಾರ್ಥಕ ಕಾರ್ಯಗಳಿಗೆ ಪ್ರೇರಣೆಯಾಗಿರುವ ಮಾತೃಶ್ರೀ ಹೇಮಾವತಿ.ವಿ ಹೆಗ್ಗಡೆಯವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಆಗಮಿಸಿದ್ದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ‘ರೋಬೋಟ್ ಶೃತಿ’ಯ ವಿದ್ಯಾರ್ಥಿಗಳೊಂದಿಗಿನ ಒಡನಾಟವನ್ನು ನೋಡಿ ಪ್ರಶಂಸೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.











