37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿವರದಿ

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

ದಿ. ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವರು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಫೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್‌ ಆಫ್‌ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಹತ್ತನೇ ತರಗತಿಯ ವರೆಗೆ ಕಲಿತಿರುವ ಈಕೆ 4 ಅಡಿ 6 ಇಂಚು ಎತ್ತರವಿದ್ದು, ಸಪೂರ ಶರೀರ, ಉರುಟು ಮುಖವನ್ನು ಹೊಂದಿರುತ್ತಾರೆ. ಕನ್ನಡ ತುಳು ಭಾಷೆಯನ್ನು ಮಾತನಾಡುತ್ತಾರೆ. ಈಕೆಯ ಬಗ್ಗೆ ತಿಳಿದವರು ಉಪ್ಪಿನಂಗಡಿ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಬೇಕೆಂದು ಠಾಣಾಧಿಕಾರಿ ಸುತೇಶ್ ಎಸ್. ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

Related posts

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya
error: Content is protected !!