July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವಿದ್ಯಮಾನದಲ್ಲಿ ಶಿಕ್ಷಣ ಕೇವಲ ಪದವಿಗೆ ಮಾತ್ರ ಸೀಮಿತವಾಗಿಲ್ಲ. ಜಗತ್ತು ಪ್ರತಿಭಾನ್ವೇಷಣೆಯಲ್ಲಿದೆ. ಈ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಮಕ್ಕಳು ವೃತ್ತಿಪರ ಕ್ಷೇತ್ರದಲ್ಲಿ ಮುನ್ನಡೆಯಲು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹಳ ಮಹತ್ವಪೂರ್ಣವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲೇ ಇದೇ ಮೊದಲ ಬಾರಿಗೆ ಎಂಬಂತೆ ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನದ ಕಾರ್ಯಕ್ರಮವನ್ನು ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಿಂದ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಎಂಬ ವಿಶೇಷ ಕಾರ್ಯಕ್ರಮವನ್ನು ಪರಿಚಯಿಸಲಾಗುತ್ತಿದೆ.


ವಿದ್ಯಾರ್ಥಿಗಳ ಭವಿಷ್ಯಕ್ಕೊಂದು ಬುನಾದಿ:
ಪದವಿ ಶಿಕ್ಷಣಕ್ಕೆ ಪ್ರವೇಶ ಪಡೆಯಬೇಕಾದರೆ ಪ್ರವೇಶ ಪರೀಕ್ಷೆ ಕಡ್ಡಾಯವಾಗಿದೆ. ಮಕ್ಕಳು ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗೆ ಅಣಿಯಾಗಬೇಕಾದರೆ ಅದರ ಪ್ರಾಮುಖ್ಯತೆಯನ್ನು ಅರಿತುಕೊಂಡು ನುರಿತ ಶಿಕ್ಷಕರ ಮಾರ್ಗದರ್ಶನದಲ್ಲಿ ಮುನ್ನಡೆದಲ್ಲಿ ಮಾತ್ರ ಪ್ರವೇಶ ಪರೀಕ್ಷೆ ಎಂಬ ಸವಾಲನ್ನು ಎದುರಿಸಲು ಸಜ್ಜಾಗುತ್ತಾರೆ. ಮಕ್ಕಳಿಗೆ ಆತ್ಮವಿಶ್ವಾಸ ತುಂಬಿ ಅವರ ಮುಂದಿರುವ ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಹಾಗೂ ಅವರಲ್ಲಿ ವಿಶೇಷ ಆಸಕ್ತಿ ಹುಟ್ಟಿಸುವ ಸಲುವಾಗಿ ವೃತ್ತಿಪರ ಆಪ್ತ ಸಮಾಲೋಚನೆ ಮಕ್ಕಳಿಗೆ ಅತ್ಯವಶ್ಯ. ಮಕ್ಕಳು ಪ್ರೌಢ ಶಿಕ್ಷಣಕ್ಕೆ ಪ್ರವೇಶಿಸುವಾಗಲೇ ನಾವು ಭವಿಷ್ಯದ ಕನಸು ಕಟ್ಟಿಕೊಂಡು ಮುಂದಿನ ಶಿಕ್ಷಣಕ್ಕೆ ಅಣಿಯಾದಲ್ಲಿ ಮಾತ್ರ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿ ತಮ್ಮ ನೆಚ್ಚಿನ ಕಾರ್ಯಕ್ಷೇತ್ರಕ್ಕೆ ಪ್ರವೇಶಿಸಲು ಸಹಕಾರಿಯಾಗುತ್ತದೆ.

ಕಾರ್ಯಕ್ರಮವು ವಿಭಿನ್ನ ನೋಟದೊಂದಿಗೆ ಆರಂಭಗೊಂಡು ವರ್ಷಪೂರ್ತಿ ನಿರಂತರವಾಗಿ ನಡೆಯುವಂತದ್ದಾಗಿದೆ. ಈ ವೇಳೆ ವಿದ್ಯಾರ್ಥಿಗಳ ಆಸಕ್ತಿ, ಸಾಮರ್ಥ್ಯ ಹಾಗೂ ದೀರ್ಘಕಾಲೀನ ಗುರಿಗಳನ್ನು ಆಧರಿಸಿ ಸರಿಯಾದ ವೃತ್ತಿ ದಿಕ್ಕು ತಿಳಿದುಕೊಳ್ಳಲು ನಮ್ಮ ಅನುಭವಿ ಉಪನ್ಯಾಸಕರು ಮತ್ತು ಮಾರ್ಗದರ್ಶಕರಿಂದ ವೈಯಕ್ತಿಕ ಸಲಹೆ ನೀಡಲಾಗುತ್ತದೆ.


ಅತಿಥಿ- ಅಭ್ಯಾಗತರು:
ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ. ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬರೋಡದ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ಸಿರೋ ಮಲಬಾರ್ ಕ್ಯಾಥೊಲಿಕ್ ಧರ್ಮಪ್ರಾಂತ್ಯದ ಪ್ರಧಾನ ಗುರುಗಳಾದ ಫಾ.ಜೋಸೆಫ್ ವಲಿಯಪರಂಬಿಲ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಕುವೆಟ್ಟು ಗ್ರಾಪಂ ಅಧ್ಯಕ್ಷೆ ಭಾರತಿ ಶೆಟ್ಟಿ, ಬೆಳ್ತಂಗಡಿ ಪೊಲೀಸ್ ವಿಭಾಗದ ಡಿವೈ.ಎಸ್.ಪಿ. ರೋಹಿಣಿ ಸಿ.ಕೆ., ಭಾಗವಹಿಸಲಿರುವರು. ವಿಶೇಷ ಆಹ್ವಾನಿತರಾಗಿ ಪದ್ಮಶ್ರೀ, ಶಿಕ್ಷಣ ಸಂತ ಹರೇಕಳ ಹಾಜಬ್ಬ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಅವರನ್ನು ಕಾಲೇಜು ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಗುವುದು.

ಪ್ರತಿಭಾ ಪುರಸ್ಕಾರವಾಗಿ ಲ್ಯಾಪ್‌ಟಾಪ್, ಟ್ಯಾಬ್
ಕಾರ್ಯಕ್ರಮ ಉದ್ಘಾಟನೆ ಬಳಿಕದ ದಿನದಲ್ಲಿ “ವಿದ್ವತ್ ಪ್ರತಿಭಾನ್ವೇಷಣೆ” ಎಂಬ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯದ ಎಲ್ಲೆಡೆಯಿಂದ ಆಗಮಿಸುವ ೧೦ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪರೀಕ್ಷೆ” ಬರೆಯುವ ಅವಕಾಶವನ್ನು ವಿದ್ವತ್ ಎಜುಕೇಶನ್ ಫೌಂಡೇಶನ್ ನೀಡಲಿದೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಶೇಷ ಗೌರವ ನೀಡುವ ಸಲುವಾಗಿ ವಿದ್ವತ್ ಕೆಲವೊಂದು ಯೋಜನೆಗಳನ್ನು ಹಮ್ಮಿಗೊಂಡಿದೆ. ಅಗ್ರ ಕ್ರಮಾಂಕದಲ್ಲಿ ಗುರುತಿಸಿರುವ ವಿದ್ಯಾರ್ಥಿಗೆ “ಲ್ಯಾಪ್‌ಟಾಪ್” ಮತ್ತು ಇತರ ಪ್ರತಿಭಾನ್ವಿತ ೧೦ ವಿದ್ಯಾರ್ಥಿಗಳಿಗೆ “ಟ್ಯಾಬ್”ನ್ನು ವಿಶೇಷ ಬಹುಮಾನವಾಗಿ ನೀಡಲಿದೆ ಹಾಗೂ ಟ್ಯಾಲೆಂಟ್ ಟೆಸ್ಟ್ ಅಥವಾ ಪ್ರತಿಭಾ ಪರೀಕ್ಷೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೂ ಅವರ ಅಂಕಗಳಿಕೆಗನುಗುಣವಾಗಿ ಕಾಲೇಜು ಶುಲ್ಕದಲ್ಲಿ ವಿಶೇಷ ರಿಯಾಯಿತಿಯನ್ನು ಒದಗಿಸಲಾಗುತ್ತದೆ ಎಂದು ವಿದ್ವತ್ ಪಿಯು ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ್ ಈ. ಮಂಡಗಳಲೆ, ಪ್ರಾಂಶುಪಾಲ ಹರೀಶ್ ಕೆ.ಆರ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

54 ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ: ಸ್ಪರ್ಧಾತ್ಮಕ ಪರೀಕ್ಷೆಯಡಿ ಸರಿಸುಮಾರು ೫೪ಕ್ಕೂ ಅಧಿಕ ಪರೀಕ್ಷೆಗಳಿವೆ. ಆದರೆ ಬಹುತೇಕ ಮಂದಿಗೆ ಈ ಕುರಿತು ಸುದೀರ್ಘ ಮಾಹಿತಿ ಕೊರತೆಯಿರುವುದು ಸಮೀಕ್ಷೆಯಡಿ ಕಂಡುಬAದಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗೋಪಾಯದ ಹುಡುಕಾಟದಲ್ಲಿ ಪೋಷಕರು ಅಲೆದಾಡುವುದು, ಸರಿಯಾದ ಮಾರ್ಗದರ್ಶನದ ಕೊರತೆಯಿಂದ ಮಕ್ಕಳು ತಮ್ಮದಲ್ಲದ ತಪ್ಪಿಗೆ ಅವರ ಗುರಿ ತಲುಪಲಾಗದಿದ್ದಲ್ಲಿ ಪರಿತಪಿಸುವುದು. ಇವೆಲ್ಲವೂ ನಮ್ಮ ಸುಮಾರು ೩೦ ವರ್ಷಗಳ ಶೈಕ್ಷಣಿಕ ವಲಯದ ಅನುಭವದಲ್ಲಿ ಕಂಡುಕೊAಡಿರುವ ಗಂಭೀರ ವಿಚಾರಗಳಾಗಿವೆ. ಈ ನಿಟ್ಟಿನಲ್ಲಿ ಮಕ್ಕಳ ಶ್ರೇಯೋಭಿವೃದ್ಧಿಯ ಹಿತದೃಷ್ಟಿಯಿಂದ “ವಿದ್ವತ್ ಎಜುಕೇಶನ್ ಫೌಂಡೇಶನ್” “Walk-in to Vidvath” A step into success ಎಂಬ ಕಾರ್ಯಕ್ರಮವನ್ನು ಪ್ರಥಮವಾಗಿ ಪರಿಚಯಿಸುತ್ತಿದೆ

ನೂತನ ಲ್ಯಾಬ್ ಉದ್ಘಾಟನೆ
ವಿದ್ವತ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪಠ್ಯಕ್ಕೆ ಪೂರಕ, ಪ್ರಯೋಗಶೀಲತೆಗೆ ಸಹಕಾರಿಯಾಗಿ ಅತ್ಯಾಧುನಿಕ ಹಾಗೂ ನಾವೀನ್ಯ ಮಾದರಿಯಲ್ಲಿ ಭೌತಶಾಸ್ತç, ರಸಾಯನಶಾಸ್ತ್ರ, ಜೀವಶಾಸ್ತ್ರಕ್ಕೆ ಸಂಬAಧಿಸಿದ ಸುಸಜ್ಜಿತ ಲ್ಯಾಬ್ ಸಜ್ಜುಗೊಳಿಸಲಾಗಿದ್ದು, ಅದರ ಉದ್ಘಾಟನೆಯು ಅಂದು ಮುಖ್ಯ ಅತಿಥಿಗಳಿಂದ ನೆರವೇರಲಿದೆ.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ನಿಡ್ಲೆ ಕೃಷ್ಣಪ್ಪ ಎಂ. ಕೆ ಅವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ವೈಯಕ್ತಿಕ ಧನಸಹಾಯ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya
error: Content is protected !!