September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮವು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿಯವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಹಾಗೂ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರು ಆಗಮಿಸಿ, (BLA) ಬೂತ್ ಲೆವೆಲ್ ಏಜೆಂಟ್‌ಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕೋಶಾಧಿಕಾರಿ ಸಾಲಿ ಮದ್ದಡ್ಕ, ಸದಸ್ಯರಾದ ಮುಸ್ತಫಾ ಜಿ.ಕೆ, ಅಶ್ರಫ್ ಕಟ್ಟೆ, ಮೊಹಮ್ಮದ್ ಅಲಿ ಹಾಗೂ ಬೆಳ್ತಂಗಡಿ ಕ್ಷೇತ್ರದ (BLA) ಬೂತ್ ಲೆವೆಲ್ ಏಜೆಂಟ್‌ಗಳು ಭಾಗವಹಿಸಿದ್ದರು.

Related posts

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾವೂರು : ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya
error: Content is protected !!