ಕನ್ಯಾಡಿ: ಫೆ.25 ರಿಂದ ಮಾ.01 ರ ವರೆಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವಂತಹ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀರಾಮ ಕ್ಷೇತ್ರ ಕನ್ಯಾಡಿ ಇಲ್ಲಿಯ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ನೀಡಿ ಸ್ವಾಮೀಜಿ ಯವರನ್ನು ಶ್ರೀ ಕ್ಷೇತ್ರಕ್ಕೆ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀರಾಮ ಕ್ಷೇತ್ರದ ಟ್ರಸ್ಟಿಯೂ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ಶ್ರೀ ರಾಘವೇಂದ್ರ ಪ್ರತಿಷ್ಠಾನ ಲಾಯಿಲ ಇದರ ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ, ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಉಪಸ್ಥಿತರಿದ್ದರು.











