September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಅತ್ತಿದಡಿ ನಿವಾಸಿ ಶಂಕರ ಗೌಡ (60) ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ ಟಿಎಸ್‌ಸಿ- 1(ಪೊಕ್ಸೊ) ನ್ಯಾಯಾಲಯವು ಫೆ.3 ರಂದು ವಿವಿಧ ಸೆಕ್ಷನ್ ಅಡಿಯಲ್ಲಿ 8 ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

2025ರ ಮಾರ್ಚ್‌ 25 ರಂದು ಶಂಕರಗೌಡ(60) ತನಗೆ ಪರಿಚಯವಿದ್ದ ಬಾಲಕಿಯ ಮನೆಗೆ ತೆರಳಿ ಅಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ 1(ಪೊಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಮೋಹನ ಜೆ.ಎಸ್‌. ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ.
ಬಿಎನ್‌ಎಸ್ ಕಲಂ 74ರಡಿ 3 ವರ್ಷದ ಕಠಿಣ ಶಿಕ್ಷೆ ಮತ್ತು 20,000 ರೂ.ದಂಡ, ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ 6 ತಿಂಗಳ ಶಿಕ್ಷೆ ಬಿಎನ್ ಎಸ್ ಕಲಂ 75 (2)ರಡಿ 2 ವರ್ಷ ಕಠಿಣ ಶಿಕ್ಷೆ ಮತ್ತು 15,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 4 ತಿಂಗಳು ಸಾದಾ ಸಜೆ, ಪೊಕ್ಸೊ ಕಾಯ್ದೆಯ ಕಲಂ 8 ರಡಿ 3 ವರ್ಷ ಕಠಿಣ ಶಿಕ್ಷೆ ಮತ್ತು 20,000 ರೂ.ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಿದ್ದಾರೆ. ಈ ಶಿಕ್ಷೆಗಳನ್ನು ಜತೆಯಾಗಿ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.

2 ಲಕ್ಷ ರೂ. ಪರಿಹಾರ: ದಂಡದ ಮೊತ್ತದಲ್ಲಿ 50,000 ರೂ. ಅಲ್ಲದೆ, 1.50 ಲಕ್ಷ ರೂ. ಹೆಚ್ಚುವರಿ ಪರಿಹಾರವನ್ನು ಸಂತ್ರಸ್ತ ಬಾಲಕಿಗೆ ನೀಡಬೇಕು ಎಂದು ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (ತನಿಖಾಧಿಕಾರಿ) ಸಮರ್ಥ್ ಆರ್ ಗಾಣಿಗೇರ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ತನಿಖಾ ಸಹಾಯಕರಾಗಿ ಪ್ರಮೋದಿನಿ ಹಾಗೂ ಕೋರ್ಟ್ ಬೀಟ್ ಮೇಹಬೂಬ್ ಪಾಟೇಲ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಓಮನ ಸಹಕರಿಸಿದ್ದರು. ಪೋಕ್ಸೊ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ಹಾರೆ.

Related posts

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ಕೇಳ್ತಾಜೆ ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!